ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ, ಸಿಎಂ ಪಟ್ಟದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಕೊನೆಗೂ ಅಧಿಕಾರ ಹಸ್ತಾಂತರದ ಗುಟ್ಟನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ.
ಹೌದು.. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಿಯೇ ಇಲ್ಲ ಎಂಬುದಾಗಿದೆ. ಅಲ್ಲದೇ ನನಗೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರೋದಕ್ಕೆ ಇಷ್ಟವಿಲ್ಲ. ಪಕ್ಷ ಇದ್ದರೇ ನಾವೆಲ್ಲ. ಪಕ್ಷವನ್ನು ನಾನು ವೀಕ್ ಮಾಡೋದಿಲ್ಲ ಎಂದಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರೇ ಬಜೆಟ್ ಮಂಡಿಸುತ್ತೇನೆ ಎಂದಿದ್ದಾರೆ. ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿ, ಪಕ್ಷಕ್ಕೆ ದುಡಿದು ಕೆಲಸ ಮಾಡಿದ್ದಾರೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ ಎಂಬುದಾಗಿ ತಿಳಿಸಿದರು.
SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ








