ಗದಗ : ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಧರಣಿ ನಡೆಸುತ್ತಿದ್ದಾರೆ. ಗದಗದ ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ವೇಳೆ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಉಪನ್ಯಾಸಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ತಕ್ಷಣ ಎಚ್ಚೆತ್ತುಕೊಂಡು ಪೋಲಿಸ್ ಸಿಬ್ಬಂದಿಗಳು ಪೆಟ್ರೋಲ್ ಬಾಟಲಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ವೇಳೆ ಚಾಕು ಪ್ರದರ್ಶಿಸಿ ಉಪನ್ಯಾಸಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಕೌನ್ಸೆಲಿಂಗನ್ನು ತಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ. ಅಥಿತಿ ಉಪನ್ಯಾಸಕರ ನೇಮಕಾತಿಗೆ ಅವೈಜ್ಞಾನಿಕ ನಿಯಮ ಜಾರಿ ಮಾಡಿದ್ದಕ್ಕೆ ಕಿಡಿಕಾರಿದ್ದಾರೆ. ಕಳೆದ 20 ರಿಂದ 30 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು ಅತಂತ್ರರಾಗಿದ್ದಾರೆ.
ಬೆಂಗಳೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬಾಗಲಕೋಟೆ ಹಾಗು ಗದಗ ಸೇರಿದಂತೆ ಹಲವು ಜಿಲ್ಲೆಗಳಿಂದ ಉಪನ್ಯಾಸಕರು ಆಗಮಿಸಿದ್ದಾರೆ. ಈಗಾಗಲೇ ಸೇವೆ ಸಲ್ಲಿಸುತ್ತಿರುವವರನ್ನೇ ನೇಮಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ. ಧರಣಿ ನಿರತ ಪ್ರಥಮ ದರ್ಜೆ ಕಾಲೇಜು ಅಥಿತಿ ಉಪನ್ಯಾಸಕರು ಆಗ್ರಹಿಸಿದ್ದಾರೆ.








