ಬೆಂಗಳೂರು: ಡಿಸೆಂಬರ್.25ರಂದು ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಕ್ಷೇತ್ರವನ್ನು 29 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ. 29.00 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಶ್ರೀ.ಕೆ.ಹೆಚ್. ಮುನಿಯಪ್ಪ, ಮಾನ್ಯ ಆಹಾರ ಹಾಗೂ ನಾಗರೀಕ ಸರಬರಾಜು ಸಚಿವರು ಅವರ ಘನಉಪಸ್ಥಿತಿಯಲ್ಲಿ ನೀಡಲಾಯಿತು. ಅದರಲ್ಲಿ ಪ್ರಮುಖವಾಗಿ :
ರೂ.16 ಕೋಟಿ ವೆಚ್ಚದಲ್ಲಿ ದಾಸೋಹ ಭವನ
ರೂ. 1.96 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ
ರೂ.3.53 ಕೋಟಿ ವೆಚ್ಚದಲ್ಲಿ ರಥ ಬೀದಿ
ರೂ.1.62 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಮೇಲ್ದರ್ಜೆರಿಗೇರಿಸುವುದು
ರೂ. 28 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರಿನ ಟ್ಯಾಂಕ್ ನಿರ್ಮಾಣ
ರೂ. 43 ಲಕ್ಷ ವೆಚ್ಚದಲ್ಲಿ ಹೊಸ ಶೌಚಾಲಯಗಳ ನಿರ್ಮಾಣ ಒಳಗೊಂಡಿವೆ.
* 2025-26ನೇ ಸಾಲಿನ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ರವರ ಬ್ರಹ್ಮರಥೋತ್ಸವವು ದಿನಾಂಕ: 25/12/2025 ರ ಗುರುವಾರದಂದು ನೆರವೇರಲಿದೆ.
* ಈ ಬಾರಿ ವಿಶೇಷವಾಗಿ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಕಲ್ಪಿಸಲಾಗಿದೆ.
* ಭಕ್ತಾಧಿಗಳ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, Q Line ವ್ಯವಸ್ಥೆ, ಪ್ರಸಾದದ ವ್ಯವಸ್ಥೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ವಾಹನಗಳಿಗೆ Parking ವ್ಯವಸ್ಥೆಗಳನ್ನು ಮಾಡಲಾಗುತ್ತದೆ.
* 2025-26ನೇ ಸಾಲಿನ ಡಿಸೆಂಬರ್ 01 ನೇ ತಾರೀಖಿನಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸುವ ವಾಹನಗಳ ಸುಂಕ ವಸೂಲಾತಿಯನ್ನು ರದ್ದುಗೊಳಿಸಿ ಉಚಿತವಾಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
* ಹಿರಿಯ ನಾಗರೀಕರು, ವಿಶೇಷ ಚೇತನರು, 01 ವರ್ಷದ ಒಳಗಿನ ಶಿಶುಗಳ ತಾಯಂದಿರಿಗೆ ಮತ್ತು ಗರ್ಭಿಣಿ ಸ್ತ್ರೀಯರಿಗೆ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಲಿದೆ.
* 2025-26ನೇ ಸಾಲಿನ ರಾಸುಗಳ ಜಾತ್ರೆಯು ದಿನಾಂಕ: 10/12/2025 ರಿಂದ 18/12/2025ರ ವರೆಗೂ ಜರುಗಲಿದೆ.
* ಈ ಬಾರಿ ರಾಸುಗಳ ಜಾತ್ರಾ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುತ್ತದೆ.
* ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆ ಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗುತ್ತದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಶರತ್ ,ಆಯುಕ್ತರು, ಮುಜರಾಯಿ ಇಲಾಖೆ, ಬಸವರಾಜು ಎ.ಬಿ. ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ, ಕಾರ್ಯನಿರ್ವಹಣಾಧಿಕಾರಿ ದಿನೇಶ್, ಅಪರ ಜಿಲ್ಲಾಧಿಕಾರಿ, ಪ್ರಾಧಿಕಾರದ ಸದಸ್ಯರುಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
BIG NEWS: ಕೊನೆಗೂ ಅಧಿಕಾರ ಹಸ್ತಾಂತರದ ಗುಟ್ಟು ಬಿಚ್ಚಿದ್ದ ಡಿಸಿಎಂ ಡಿ.ಕೆ ಶಿವಕುಮಾರ್
SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ








