ಗದಗ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಧರಣಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ನಡೆದಿದೆ.
ಗದಗದ ಡಿಸಿ ಕಚೇರಿ ಎದುರು ಅತಿಥಿ ಉಪನ್ಯಾಸಕರು ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ತೀವ್ರಗೊಂಡಿದ್ದು, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಉಪನ್ಯಾಸಕ ಆತ್ಮಹತ್ಯೆಗೂ ಯತ್ನಿಸಿದರು. ಆದರೇ ಸ್ಥಳದಲ್ಲಿದ್ದಂತ ಪೊಲೀಸರು ತಕ್ಷಣವೇ ಬಾಟಲಿ ವಶಕ್ಕೆ ಪಡೆದು, ರಕ್ಷಣೆ ಮಾಡಿದ್ದಾರೆ.
ಮತ್ತೊಂದೆಡೆ ಪ್ರತಿಭಟನೆ ವೇಳೆಯಲ್ಲೇ ಚಾಕು ಪ್ರದರ್ಶಿಸಿ ಅತಿಥಿ ಉಪನ್ಯಾಸಕಿ ಆಕ್ರೋಶ ಹೊರ ಹಾಕಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನಡೆಯುತ್ತಿರೋ ಕೌನ್ಸೆಲಿಂಗ್ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.
ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವೈಜ್ಞಾನಿಕ ನಿಯಮ ಜಾರಿಗೊಳಿಸಲಾಗಿದೆ. 20 ರಿಂದ 30 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು ಅತಂತ್ರರಾಗಿದ್ದಾರೆ ಎಂಬುದಾಗಿ ಆಕ್ರೋಶವನ್ನು ಅತಿಥಿ ಉಪನ್ಯಾಸಕರು ಹೊರಹಾಕಿದ್ದಾರೆ.
ಬೆಂಗಳೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಗದಗಕ್ಕೆ ಆಗಮಿಸಿದಂತ ಅತಿಥಿ ಉಪನ್ಯಾಸಕರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸೇವೆ ಸಲ್ಲಿಸುತ್ತಿರುವವರನ್ನೇ ನೇಮಿಸಿಕೊಳ್ಳುವಂತೆಯೂ ಆಗ್ರಹಿಸಿದ್ದಾರೆ.
SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ








