ಧಾರವಾಡ : ಕೊಲ್ಹಾಪುರದ ಕನ್ನೆರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಲಾಗಿತ್ತು. ಈ ವಿಚಾರವಾಗಿ ಶ್ರೀಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಕನ್ನೇರಿ ಮಠದ ಶ್ರೀಗಳಿಗೆ ಹಾಕಿದ್ದ ನಿರ್ಬಂಧ ತೆರವುಗೊಳಿಸಿ ಆದೇಶ ನೀಡಿದೆ.
ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ಪ್ರಕಟಿಸಿದ್ದು ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧಿಸಿದಂತೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದರು. ನವೆಂಬರ್ 5 ರಂದು ಹಳ್ಳಿಕೇರಿಯಲ್ಲಿ ಕಾರ್ಯಕ್ರಮ ನಿಗದಿಯಾಗಿತ್ತು. ಕನ್ಹೆರಿ ಕಾಡಸಿದ್ದೇಶ್ವರ ಶ್ರೀಗಳ ಕಾರ್ಯಕ್ರಮ ಇತ್ತು.ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು.
ಈ ವೇಳೆ ಜಿಲ್ಲಾಧಿಕಾರಿ ಕಾರ್ಯಕ್ರಮಕ್ಕೆ ಬರದಂತೆ ನಿರ್ಬಂಧ ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಕನ್ನೇರಿ ಶ್ರೀಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಿರ್ಬಂಧ ತೆರವು ಮಾಡಿ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ದುಃಖ ಮೊದಲು ಕನ್ನೇರಿ ಶ್ರೀ ಗಳಿಗೆ ಲಿಂಗಾಯತ ಸಮುದಾಯದ ಕುರಿತು ಅವಹೇಳನ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ನಿರ್ಬಂಧ ವಿಧಿಸಲಾಗಿತ್ತು ಈ ಕುರಿತು ಶ್ರೀಗಳು ಸುಪ್ರೀಂ ಕೋರ್ಟ್ ಕದ ತಟ್ಟಿದರು ಸುಪ್ರೀಂ ಕೋರ್ಟ್ ಸಹ ಶ್ರೀಗಳಿಗೆ ಚಾಟಿ ಬೀಸಿತ್ತು.








