ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರ ಅಕಾಲಿಕ ನಿಧನದ ವಿಚಾರ ನೋವುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ, ಬಂಧುಮಿತ್ರರಿಗೆ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಬಹಿರಂಗವಾಗೇ ಒತ್ತಾಯಿಸಿದ ಕಾಂಗ್ರೆಸ್ ಶಾಸಕ
ಮಂಡ್ಯ ಕೃಷಿ ವಿವಿಗೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ: ಸಚಿವ ಎನ್.ಚಲುವರಾಯಸ್ವಾಮಿ








