ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯ ಪುತ್ರನೇ ಐದು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯ ಪುತ್ರನೇ ಐದು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಬಾದಾಮಿಯ ಮಕ್ಕಳ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಿಡಿಪಿಒ ದಸ್ತಗೀರಸಾಬ್ ಮುಲ್ಲಾ ಕೊಟ್ಟ ದೂರಿನನ್ವಯ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಶಿಲ್ಪಾ ಕುಲಕರ್ಣಿ ಆಗಮಿಸಿ ಪೊಲೀಸ್ ಠಾಣೆ ಆವರಣದಲ್ಲಿ ಮಗುವನ್ನು ಕೂಡಿಸಿಕೊಂಡು ಸಾರ್ವಜನಿಕರ ಎದುರು ಆಪ್ತ ಸಮಾಲೋಚನೆ ನಡೆಸಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.








