ಮುಂಬೈ : ಪೋಷಕರನ್ನು ನೋಡಿಕೊಳ್ಳದ ಮಕ್ಕಳಿಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಮಹಾರಾಷ್ಟ್ರದ ಜುನ್ನರ್‌ನ ಜಿಲ್ಲಾ ನ್ಯಾಯಾಲಯವು ವೃದ್ಧ ತಂದೆ ತಾಯಿಯನ್ನು ನೋಡಿಕೊಳ್ಳದ ಪುತ್ರನಿಗೆ 3 ತಿಂಗಳು ಜೈಲುಶಿಕ್ಷೆ ಹಾಗೂ 5,000 ರು. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಮಕ್ಕಳು ವೃದ್ಧ ತಂದೆ ತಾಯಿಯರನ್ನು ನೋಡಿಕೊಳ್ಳದೆ ಬೀದಿಗೆ ಬಿಡುವ ಅಮಾನವೀಯ ಘಟನೆಗಳು ಹೆಚ್ಚುತ್ತಿರುವ ನಡುವೆಯೇ ಕೋರ್ಟ್ ಆದೇಶ ಹೊರಡಿಸಿದೆ. ಇಬ್ಬರೂ ಮಕ್ಕಳು ತಮ್ಮ ಕೃಷಿಭೂಮಿಯನ್ನು ವಶಪಡಿಸಿ ಕೊಂಡಿದ್ದಾರೆ. ಮೂಲಭೂತ ಆವಶ್ಯಕತೆಗಳನ್ನೂ ಒದಗಿಸದೆ ಮನೆಯಿಂದ ಹೊರಹಾಕಲು ಮುಂದಾಗಿದ್ದಾರೆ.
ಚಿಕ್ಕ ಮಗ ನಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಮಾತು ಕೊಟ್ಟಿದ್ದರಿಂದ 51 ಗುಂಟೆ ಜಾಗವನ್ನು ಅವನ ಹೆಸರಿಗೆ ಮಾಡಿದ್ದೆವು. ಆದರೆ ಆತನೂ ಹೊರದಬ್ಬಿದ್ದಲ್ಲದೆ, ಹಣವನ್ನೂ ಪೀಕಿದ್ದಾನೆ’ ಎಂದು 70 ವರ್ಷದ ದಂಪತಿ 2023ರ ಮೇ 13ರಂದು ದೂರು ನೀಡಿದ್ದರು. ವಿಚಾರಣೆ ವೇಳೆ ಕಿರಿಮಗನ ನಡವಳಿಕೆ ಆಕ್ಷೇಪಾರ್ಹ ಎಂಬುದು ಸಾಬೀತಾಗಿದೆ. ಆತನನು ಬಂಧಿಸಲಾಗಿದ್ದು, ಪುತ್ರನಿಗೆ 3 ತಿಂಗಳು ಜೈಲುವಾಸ ಹಾಗೂ 5,000 ರು. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.








