ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಘಟಕ ಕಾರ್ಯಕ್ರಮದಡಿ ಎಲ್ಲ ವರ್ಗದ ರೈತರಿಗೆ ಶೇ. 90 ರ ಸಹಾಯಧನದಡಿ ತುಂತುರು ನೀರಾವರಿ (ಸ್ಪಿಂಕ್ಲರ್) ಘಟಕವನ್ನು ವಿತರಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ ಕಾರ್ಯಕ್ರಮ ನಿಗಧಿಯಾಗಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದಡಿ ಅನುದಾನ ಲಭ್ಯವಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಕೂಡಲೇ ಸಹಾಯಧನ ಬಿಡುಗಡೆ ಮಾಡಲಾಗುವುದು.
ಆದ್ದರಿಂದ ತುಂತುರು ನೀರಾವರಿ (ಸ್ಪಿಂಕ್ಲರ್) ಘಟಕವನ್ನು ಪಡೆದುಕೊಳ್ಳಲು ಇಚ್ಛಿಯಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರುಗಳಾದ ಧಾರವಾಡ ರಾಜಶೇಖರ ಅನಗೌಡರ (8277931282), ಹುಬ್ಬಳ್ಳಿ ಮಂಜುಳಾ ತೆಂಬದ (8277931288), ಕಲಘಟಗಿ ಅಮರ ನಾಯ್ಕರ (8277931291), ಕುಂದಗೋಳ ಭಾರತಿ ಮೆಣಸಿನಕಾಯಿ (9071449976), ನವಲಗುಂದ ರವೀಂದ್ರಗೌಡ ಪಾಟೀಲ (8277931295) ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








