ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಒಂದರ ಮೇಲೆ ಮೂವರು ವಿದ್ಯಾರ್ಥಿಗಳು ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸಮರ್ಥ ಸುಖದೇವ್ ಅಪ್ಪಾಜಿಗೋಳ (20) ಎಂದು ತಿಳಿದುಬಂದಿದೆ. ಇನ್ನು ಬೈಕ್ ನಲ್ಲಿ ಇದ್ದಂತಹ ಇನ್ನಿಬ್ಬರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಚಿಕ್ಕೋಡಿ ಪಟ್ಟಣದಲ್ಲಿ ಮೂರು ಬೈಕ್ ಮೇಲೆ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ.
ಪರಿಣಾಮ ಅಪಘಾತದಲ್ಲಿ ಸಮರ್ಥ ಸ್ಥಳದಲ್ಲಿ ಸಾವನಪ್ಪಿದ್ದು, ಉಳಿದ ಇಬ್ಬರು ಸ್ನೇಹಿತರಾದ ಅರವಿಂದ ಶಂಕರ ಮ್ಯಾಗೇರಿ (19) ಹಾಗೂ ಸಚಿನ್ ಮಹಾಂತೇಶ್ ಬಡಕೆ (19) ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಬೆಳಗಾವಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ಪದವಿ ಓದುತ್ತಿದ್ದರು ಎಂದು ತಿಳಿದುಬಂದಿದೆ.








