ಬೆಂಗಳೂರು : ನಿನ್ನೆ ಬೆಳಂ ಬೆಳಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ದಾಳಿಯ ವೇಳೆ ಅಧಿಕಾರಿಗಳ ಅಕ್ರಮ ಆಸ್ತಿ ಕಂಡು, ಶಾಕ್ ಆಗಿದ್ದಾರೆ. ಇದುವರೆಗೂ ಲೋಕಾಯುಕ್ತ ಅಧಿಕಾರಿಗಳು 35.31 ಆಸ್ತಿ ಪತ್ತೆ ಹಚ್ಚಿದ್ದಾರೆ.
ಹೌದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 10 ಮಂದಿ ನೌಕರರಿಗೆ ಸೇರಿದ 47 ಸ್ಥಳಗಳ ಮೇಲೆ ಏಕಕಾಲದಲ್ಲಿ ಮಂಗಳವಾರ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.
ನಿನ್ನೆ ಬೆಳ್ಳಂಬೆಳಗ್ಗೆ ಬೆಂಗಳೂರು ನಗರ, ಮೈಸೂರು, ಮಂಡ್ಯ, ಬೀದರ್, ಹಾವೇರಿ, ಧಾರವಾಡ, ಗದಗ, ಕೊಡಗು ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 10 ಮಂದಿ ಅಧಿಕಾರಿಗಳ ಮನೆ – ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿ ಸುಮಾರು 35.31 ಕೋಟಿ ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿ ಪತ್ತೆ ಹಚ್ಚಿದ್ಧಾರೆ.








