ಲಖಿಂಪುರ : ದೇಶದಲ್ಲಿ ದಿನದಿಂದ ದಿನಕ್ಕೆ ಅಪಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ರಸ್ತೆ ಅಪಘಾತ ಸಂಭವಿಸಿ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವೇಗವಾಗಿ ಬಂದ ಆಲ್ಟೋ ಕಾರು ನಿಯಂತ್ರಣ ತಪ್ಪಿ ಧಾಖೇರ್ವಾ-ಗಿರ್ಜಾಪುರಿ ಹೆದ್ದಾರಿಯಲ್ಲಿರುವ ಶಾರದಾ ಕಾಲುವೆಗೆ ಉರುಳಿದೆ. ಕಾರಿನಲ್ಲಿದ್ದ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಕಾರನ್ನು ಚಲಾಯಿಸುತ್ತಿದ್ದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಪೊಲೀಸರ ಪ್ರಕಾರ, ಮೃತರು ಮತ್ತು ಗಾಯಗೊಂಡವರೆಲ್ಲರೂ ಒಂದೇ ಗ್ರಾಮದ ನಿವಾಸಿಗಳಾಗಿದ್ದು, ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದರು. ತಡರಾತ್ರಿ ಅಪಘಾತ ಸಂಭವಿಸಿದೆ. ಕತ್ತಲೆ ಮತ್ತು ಅತಿ ವೇಗದಿಂದಾಗಿ, ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡು ನೇರವಾಗಿ ಕಾಲುವೆಗೆ ಉರುಳಿದೆ. ಕಾಲುವೆಯಲ್ಲಿ ನೀರಿನ ಮಟ್ಟ ತುಂಬಾ ಹೆಚ್ಚಾಗಿದ್ದು, ಕಾರು ಸಂಪೂರ್ಣವಾಗಿ ಮುಳುಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.








