ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿಗೆ ಡಿಕೆ ಶಿವಕುಮಾರ್ ಅವರು ಆಫರ್ ಕೊಟ್ಟಿದ್ದಾರೆ ಎನ್ನಲಾಗಿದೆ. ನಿನ್ನೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಇಬ್ಬರ ನಡುವಿನ ಮಾತುಕತೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಒಂದು ವೇಳೆ ನಾನು ಸಿಎಂ ಆದರೆ ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನವನ್ನು ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಆದರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಇದನ್ನು ನಿರಾಕರಿಸಲ್ಲ, ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಸದ್ಯಕ್ಕೆ ಹೈಕಮಾಂಡ್ ಹೇಳಿದ ಹಾಗೇ ಕೇಳುವೆ, ಹೈಕಮಾಂಡ್ ನಿಮ್ಮನ್ನು ಒಪ್ಪಿದರೆ ನಿಮ್ಮ ಪರವಾಗಿ ನಾವು ಇರುತ್ತೇವೆ ಅಂತ ಹೇಳಿದ್ದಾರೆ ಎನ್ನಲಾಗಿದೆ.
ಸಿಎಂ ಸ್ಥಾನಕ್ಕೆ ಕಣ್ಣಿಟ್ಟಿರುವ ಡಿ.ಕೆ ಶಿವಕುಮಾರ್ ಅವರು ಸದ್ಯ ಸಿಎಂ ಸಿದ್ದರಾಮಯ್ಯ ಅವರ ಪರವಾಗಿರುವ ನಾಯಕರ ಮೇಲೆ ಕಣ್ಣಿಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಿಂಬಾಲಕರು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟು ಹೋಗುವುದಿಲ್ಲ ಎನ್ನುವುದು ಡಿ.ಕೆ ಶಿವಕುಮಾರ್ ಚೆನ್ನಾಗಿ ಗೊತ್ತಿರುವ ಹಿನ್ನಲೆಯಲ್ಲಿ ಸದ್ಯ ಡಿ.ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಗುರುತಿಸಿಕೊಂಡಿರುವ ನಾಯಕರ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ನಡುವೆ ರಾಹುಲ್ ಗಾಂಧಿಗೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಮಾಹಿತಿಗಳನ್ನು ಸಚಿವ ಪ್ರಿಯಾಂಕ ಖರ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ರಾಹುಲ್ ಗಾಂಧಿ ಜೊತೆಗೆ ಸತತ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಈ ನಡುವೆ ಡಿ.ಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಅವರು ನಾನು ಕರೆ ಮಾಡುವೆ, ಕಾಯಿರಿ ಅಂತ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.








