ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಲು ಜೋರಾಗಿದ್ದು ಒಂದು ಕಡೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕುರ್ಚಿಗಾಗಿ ಜಟಪಟಿ ನಡೆಸುತ್ತಿದ್ದರೆ ಮತ್ತೊಂದು ಕಡೆ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ ಈ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ ಸದ್ಯ ರಾಜ್ಯದಲ್ಲಿ ಬದಲಾವಣೆಯ ಚರ್ಚೆ ಇಲ್ಲವೇ ಇಲ್ಲ. ಹೈಕಮಾಂಡ್ ಈ ವಿಚಾರವಾಗಿ ಎಲ್ಲವನ್ನು ನಿರ್ಧಾರ ಮಾಡುತ್ತೆ. ಇನ್ನು ನಿನ್ನೆ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು, ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.
ಡಿಸಿಎಂ ಡಿಕೆಗೂ ಕೂಡ ಸಿಎಂ ಆಗುವ ಆಸೆ ಇದ್ದೇ ಇರುತ್ತೆ ಅವರು ಮೊದಲಿನಿಂದಲೂ ಕ್ಲೈಮ್ ಮಾಡಿದ್ದಾರೆ.ಆದರೆ ಹೈಕಮಾಂಡ್ ಸಿದ್ದರಾಮಯ್ಯಗೆ ಅವಕಾಶ ಕೊಟ್ಟಿದೆ. ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ ಆ ವಿಚಾರವಾಗಿ ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ. ಪಕ್ಷದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಮೊದಲಿನಿಂದಲೂ ಸಿದ್ದರಾಮಯ್ಯ ಜೊತೆಗೆ ಗುರುತಿಸಿಕೊಂಡಿದ್ದೇವೆ ಎಂದು ತಿಳಿಸಿದರು.








