ಕಲಬುರ್ಗಿ : ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಭೀಕರ ಕಾರು ಅಪಘಾತದಲ್ಲಿ ಮೃಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈರಣ್ಣ ಸಿರಸಂಗಿ ಅವರು ಬುಧವಾರ ನಸುಕಿನಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ಅವಘಡದಲ್ಲಿ ಈರಣ್ಣ ಬೀಳಗಿ, ಶಂಕರ್ ಬೀಳಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ತೀವ್ರ ಗಾಯಗೊಂಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೀಗ ಈರಣ್ಣ ಸಿರಸಂಗಿ ಕೂಡ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕಾರಿನ ಚಾಲಕ ರಾಜು ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.








