ಕೊಪ್ಪಳ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಕೊಪ್ಪಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೋ ಕೇಸ್ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಹೊಡ್ಡೆ ನೋವು ಕಾಣಿಸಿಕೊಂಡಿತ್ತು. ನೋವಿನಿಂದ ನರಳಾಡಿದಂತ ವಿದ್ಯಾರ್ಥಿನಿಯನ್ನು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಯಲ್ಲಿ ಅಪ್ರಾಪ್ತ 10ನೇ ತರಗತಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿದು ಬಂದಿದೆ.
ಈ ವಿಷಯ ತಿಳಿದು ಆಸ್ಪತ್ರೆಗೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ ಆಸ್ಪತ್ರೆಗೆ ಭೇಟಿ ನೀಡಿ, ಬಾಲಕಿಯ ಆರೋಗ್ಯ ವಿಚಾರಿಸಿದರು. ಮತ್ತೊಂದೆಡೆ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಂತ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.
ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು: ಸಿಎಂ ಸಿದ್ಧರಾಮಯ್ಯ
BIG NEWS : ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ‘CM’ ಮಾಡುತ್ತೇವೆ : ಸಚಿವ ಕೆಜೆ ಜಾರ್ಜ್ ಹೇಳಿಕೆ








