ಅಫ್ಘಾನಿಸ್ತಾನ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ ಹತ್ಯೆಯಾಗಿದ್ದಾರೆ ಎಂದು ಅಫ್ಘಾನಿಸ್ತಾನ್ ಟೈಮ್ಸ್ ಪತ್ರಿಕೆಗಳಲ್ಲಿ ವರದಿಯಾಗಿದೆ. ಜೈಲಿನಲ್ಲಿರುವ ನಾಯಕನನ್ನು ಭೇಟಿಯಾಗಲು ಒತ್ತಾಯಿಸಿದ್ದಕ್ಕಾಗಿ ಪೊಲೀಸರು ತಮ್ಮ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರ ಮೂವರು ಸಹೋದರಿಯರು ಹೇಳಿದ್ದಾರೆ.
ಇಮ್ರಾನ್ ಖಾನ್ ಅವರ ಸಹೋದರಿಯರಾದ ನೊರೀನ್ ಖಾನ್, ಅಲೀಮಾ ಖಾನ್ ಮತ್ತು ಉಜ್ಮಾ ಖಾನ್ – ಈ ವಾರ ರಾವಲ್ಪಿಂಡಿಯ ಅಡಿಯಾಲಾ ಜೈಲಿನ ಹೊರಗೆ ಜಮಾಯಿಸಿದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಿಗರೊಂದಿಗೆ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಾಜಿ ಪ್ರಧಾನಿಯನ್ನು ಭೇಟಿಯಾಗಲು ಅಧಿಕಾರಿಗಳು ಅವಕಾಶ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.








