ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಏನು ನಿಲುವು ತೆಗೆದುಕೊಳ್ಳುತ್ತೇನೆ ಎನ್ನುವುದು ಇದೀಗ ಸದ್ಯಕ್ಕೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಟ್ವೀಟ್ ಖಾತೆಯ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
ಹೌದು ಕುರ್ಚಿ ಕಿತ್ತಾಟದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಕಾರ್ಮಿಕ ಟ್ವೀಟ್ ಮಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಅದು ಜಡ್ಜ ಆಗಿರಲಿ ಅಧ್ಯಕ್ಷರಾಗಲಿ ಯಾರೇ ಆಗಿರಲಿ ನನ್ನನ್ನು ಸೇರಿಸಿ ಸಹ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಕೊಟ್ಟ ಮಾತಿನ ಶಕ್ತಿಯೇ ಜಗತ್ತಿನ ಶಕ್ತಿಯಾಗಿದೆ ಎಂದು ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಮತ್ತೆ ಕೊಟ್ಟ ಮಾತು ಪ್ರಸ್ತಾಪಿಸಿದ್ದಾರೆ.








