ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್‌ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು ಮಾಡುತ್ತಿದೆ.
ಈ ನಡುವೆ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿರುವ ಹೈಕಮಾಡ್ ಇನ್ನೇರಡು ದಿನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಕರೆದು ಮಾತನಾಡಲಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಪ್ರಸಕ್ತ ರಾಜಕೀಯ ಬಿಕ್ಕಟ್ಟು ಸೇರಿದಂತೆ ಇತರೆ ಮಾಹಿತಿಗಳನ್ನು ಪಾರ್ಟಿಯ ಹಿರಿಯ ನಾಯಕರುಗಳ ಜೊತೆಗೆ ಚರ್ಚಿಸುತ್ತ ಅಂತಿಮ ನಿರ್ಧಾರಕ್ಕೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬರಲಿದ್ದಾರೆ ಎನ್ನಲಾಗಿದೆ.
ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿದ್ದು, ಇದು ಹೊಸ ಚರ್ಚೆಗೆ ಕಾರಣವಾಗಿದೆ. ಇದಲ್ಲದೇ ಇಂದು ರಾಹುಲ್ ಗಾಂಧಿಯನ್ನು ಮಲ್ಲಿಕಾರ್ಜುನ ಖರ್ಗೆಯವರು ಭೇಟಿಯಾಗಲಿದ್ದು, ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.








