ಮಂಗಳೂರು : ನಾಳೆ ಉಡುಪಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ.
ನಾಳೆ ಬೆಳಿಗ್ಗೆ 11:05 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ, ಮಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ತೆರಳಲಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ಮತ್ತೆ ಮಂಗಳೂರಿಗೆ ವಾಪಸಾಗಲಿದ್ದಾರೆ ಮಧ್ಯಾಹ್ನ 2 ಗಂಟೆಗೆ ಏರ್ಪೋರ್ಟಿಗೆ ವಾಪಸ್ ಆಗಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಭದ್ರತೆ ನೀಡು ನಿಯೋಜನೆ ಮಾಡಲಾಗಿದೆ. ಏರ್ಪೋರ್ಟ್ ನಲ್ಲಿಯೇ SPG ಮತ್ತು ಐಬಿ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.








