ಬೆಂಗಳೂರು : ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು (Computer Education) ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಸರ್ಕಾರಿ ಶಾಲೆಯ ಮಕ್ಕಳಿಗೆ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ”ಮಕ್ಕಳಿಗೆ ಬಾಲ್ಯದಿಂದಲೇ ಸಿಗಲಿದೆ ತಾಂತ್ರಿಕ ಜ್ಞಾನ. ಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಅತ್ಯಾಧುನಿಕ ಸೌಲಭ್ಯ ಸಿಗಲಿದೆ. ರಾಜ್ಯದ 11 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಸಚಿವರು ತಿಳಿಸಿದರು.
“900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ ಹಾಕುವುದು ಶಿಕ್ಷಣ ಸಚಿವನಾಗಿ ನನ್ನ ಕರ್ತವ್ಯ,” ಎಂದು ಮಧು ಬಂಗಾರಪ್ಪ ಹೇಳಿದರು.









