ಬೆಳಗಾವಿ : ಸಿಎಂ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು ಇದರ ಮಧ್ಯ ಸಿದ್ದರಾಮಯ್ಯ ಹಠ ಬಿಟ್ಟು ಡಿಕೆ ಶಿವಕುಮಾರ್ ಗೆ ಕುರ್ಚಿ ಬಿಟ್ಟು ಕೊಡಲಿ. ಒಂದು ವೇಳೆ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟು ಕೊಡದಿದ್ದರೆ ಸರ್ಕಾರ ಪತನವಾಗಲಿದೆ ಎಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಹೇಳಿಕೆ ನೀಡಿದರು..
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇಗುಲ ಹಳ್ಳಿಯಲ್ಲಿರುವ ಮಡಿವಾಳೇಶ್ವರ ಮಠದಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಸಹಕರಿಸಿದ್ದಾರೆ ವಚನ ಭ್ರಷ್ಟರಾಗದೆ ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಬೇಕು ಇಲ್ಲದಿದ್ದರೆ ಸರ್ಕಾರವೇ ಪತನವಾಗಲಿದೆ ನಾನು ಯಾರ ಪರವಾಗಿಯೂ ಇಲ್ಲ ಯಾರ ವಿರುದ್ಧವೂ ಇಲ್ಲ ಮಾನವೀಯತೆ ದೃಷ್ಟಿಯಿಂದ ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಿದ್ದೇನೆ








