ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ ಹಾಗಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಕರೆದು ಮಾತನಾಡುತ್ತಾರೆ. ಹೈಕಮಾಂಡ್ ಏನೆ ತೀರ್ಮಾನ ಮಾಡಿದರು ಅದಕ್ಕೆ ನಾವೆಲ್ಲ ಬದಲಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಅಲ್ಲದೆ ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟ್ ಬೀಸಿದರು.
ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ 2028 ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.








