ಉಡುಪಿ : ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಆಡಳಿತ ನಡೆಯುತ್ತಿಲ್ಲ ಶೇಕಡ 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸೀಮಿತ ಆಗಿದ್ದಾರೆ. ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುತ್ತೇವೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಆಗಲ್ಲ ಎಂದು ಉಡುಪಿಯಲ್ಲಿ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿದೆ. ಸಿಎಂ ಡಿಸಿಎಂ ಮತ್ತು ಮಂತ್ರಿಗಳು ಶಾಸಕರ ನಡುವೆ ವಿಶ್ವಾಸವಿಲ್ಲ. ಸದನದಲ್ಲಿ ವಿಶ್ವಾಸ ಮತ ಯಾಚಿಸುತ್ತೇವೆ. NDA ಒಕ್ಕೂಟದಲ್ಲೂ ಈ ಬಗ್ಗೆ ಮಾತುಕತೆ ಮಾಡುತ್ತೇವೆ ರಾಜ್ಯದ ಹಿತ ಮರೆತಿರುವ ಸರ್ಕಾರವನ್ನು ಬಯಲಿಗೆ ಎಳೆಯುತ್ತೇವೆ. ಕುರ್ಚಿ ಉಳಿಸಿಕೊಳ್ಳಲು ಸ್ವಾಮೀಜಿಗಳಿಂದ ಹೇಳಿಕೆ ಕೊಡಿಸುತ್ತಿದ್ದಾರೆ.
ಗೊಂದಲದ ವಾತಾವರಣವನ್ನು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೃಷ್ಟಿ ಮಾಡಿದ್ದಾರೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಲಾಗಿದೆ ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚಿಸಲು ಮುಂದಾಗಲ್ಲ ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು ನೋಡುತ್ತಿದ್ದೇವೆ ಎಂದು ಉಡುಪಿಯಲ್ಲಿ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ಪ್ರಶ್ನಿಸಿದರು.








