ಬೆಂಗಳೂರು : ಕಲಬೆರಕೆಯ ಔಷಧ ಅಥವಾ ಸೌಂದರ್ಯವರ್ಧಕವನ್ನು ಮಾರಾಟ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ‘ಔಷಧಗಳು ಮತ್ತು ಸೌಂದರ್ಯವರ್ಧಕ-ಗಳು (ಕರ್ನಾಟಕ ತಿದ್ದುಪಡಿ) ಮಸೂದೆ-2025’ಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, “ಔಷಧಗಳು ಮತ್ತು ಸೌಂದರ್ಯವರ್ದಕಗಳು (Drugs and cosmetics) (ಕರ್ನಾಟಕ ತಿದ್ದುಪಡಿ) ವಿಧೇಯಕ, 2025″ಕ್ಕೆ ಸಚಿವ ಸಂಪುಟದ ಅನುಮೋದನೆ ಕೋರಿದೆ ಹಾಗೂ ಮುಂಬರುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ ಸದರಿ ವಿಧೇಯಕವನ್ನು ಮಂಡಿಸಲು ಕರ್ನಾಟಕ ರಾಜ್ಯ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977 ಇದರನ್ವಯ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಕೇಂದ್ರದ ಔಷಧ ಪ್ರಯೋಗಾಲಯಗಳ ಮತ್ತು ನಿರ್ದೇಶಕರು ಔಷಧ ಮತ್ತು ಸೌಂದರ್ಯವರ್ದಕಗಳು ಇವರ ಕೆಲಸ ಕಾರ್ಯಗಳನ್ನು ರಾಜ್ಯ ಸರ್ಕಾರವು ಗೊತ್ತುಪಡಿಸಿದ ಅಂಥ ಪ್ರಾಧಿಕಾರ ಅಥವಾ ಅಂಥ ಅಧಿಕಾರಿಯಿಂದ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದು. ಯಾವ ವ್ಯಕ್ತಿಯಿಂದ ಔಷಧ ಮತ್ತು ಸೌಂದರ್ಯ ವರ್ದಕಗಳನ್ನು ವಶಪಡಿಸಿಕೊಳ್ಳಲಾಗುವುದೊ ಆ ವ್ಯಕ್ತಿಯು ತಾನು ತಪ್ಪು ವ್ಯಾಪಾರದ ಮುದ್ರೆಯುಳ್ಳ ಅಥವಾ ಕಲಬೆರಕೆಯ ಔಷಧ ಅಥವಾ ಸೌಂದರ್ಯ ವರ್ದಕ ಹೊಂದಿಲ್ಲವೆಂದು ಸಾಬೀತುಪಡಿಸುವ ಜವಾಬ್ದಾರಿ ಅವನ ಮೇಲೆಯೇ ಹೊರಿಸುವುದು. ಪ್ರಕರಣ 30ರಡಿಯಲ್ಲಿ ಕೆಲವು ದಂಡಗಳನ್ನು ಜೀವಾವಧಿ ಶಿಕ್ಷೆಗೆ ವಿಸ್ತರಿಸುವುದು ಮತ್ತು ಈ ಅಧಿನಿಯಮದ ಅಡಿಯಲ್ಲಿ ಎಲ್ಲಾ ಅಪರಾಧಗಳನ್ನು ಸನ್ನೆಯ ಅಪರಾಧವೆಂದು ಹಾಗೂ ಜಾಮೀನುರಹಿತ ಅಪರಾಧವೆಂದು ಮಾರ್ಪಾಡಿಸುವುದು. ಪ್ರಕರಣ 33 ಮತ್ತು 33N ಇದರಡಿಯಲ್ಲಿ ಶುಲ್ಕ ನಿಗದಿಪಡಿಸುವುದು ಮತ್ತು ಹೆಚ್ಚುವರಿ ಷರತ್ತುಗಳನ್ನು ನಿಗದಿಪಡಿಸಲು ನಿಯಮಗಳನ್ನು ರಚಿಸುವುದು. ಈ ಅಧಿನಿಯಮದಡಿಯಲ್ಲಿ ರಚಿಸಿದ ನಿಯಮಗಳನ್ನು ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸುವುದು ಹಾಗೂ; ಇತರ ತತ್ಪರಿಣಾಮ ತಿದ್ದುಪಡಿಗಳನ್ನು ಮಾಡಲು ಪ್ರಸ್ತಾಪಿಸಲಾಗಿತ್ತು.
“ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ (ತಿದ್ದುಪಡಿ) ವಿದೇಯಕ-2025” ಕ್ಕೆ ಅನುಮೋದನೆ ಹಾಗೂ ಸದರಿ ವಿದೇಯಕವನ್ನು ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ರಾಜ್ಯದಲ್ಲಿನ ಸಿನಿ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಕಾರ್ಯಗಳಿಗಾಗಿ ಅಗತ್ಯವಿರುವ ನಿಧಿ ಸಂಗ್ರಹಣೆಗಾಗಿ Multiplex ಥಿಯೇಟರ್‌ಗಳ ಸಿನಿಮಾ ಟಿಕೆಟ್‌ಗಳ ಮೇಲೆ ಶೇಕಡ 2 ರಷ್ಟು Cess ಸಂಗ್ರಹಿಸಲು ಉದ್ದೇಶಿಸಿ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಅಧಿನಿಯಮ, 2024 ಅನ್ನು ದಿನಾಂಕ: 24-09-2024ರ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರಸ್ತುತ ಸದರಿ ಅಧಿನಿಯಮದ ಪ್ರಕರಣ 11ಕ್ಕೆ ತಿದ್ದುಪಡಿ ಮಾಡಲು ಹಾಗೂ ಪ್ರಕರಣ 18ನ್ನು ಕೈಬಿಡಲು ಉದ್ದೇಶಿಸಿ ಪ್ರಸ್ತಾಪಿಸಲಾಗಿತ್ತು.
“ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಅನುಬಂಧದಲ್ಲಿರುವಂತೆ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ರೂ. 200.00 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು” ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ವಿವರಿಸಿದರು.
ಬೆಂಗಳೂರು ನಾಗರಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ನೀರಿನ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಬಾಕಿ, ಅಸಲು ಏಕ ಕಾಲದಲ್ಲಿ ಪಾವತಿಸಿದರೆ ಬಡ್ಡಿ ಮನ್ನಾ ಮಾಡುವಂತ ನಿರ್ಧಾರ ಕೈಗೊಂಡಿದೆ. ಏಕಕಾಲಿಕ ತೀರುವಳಿ ಯೋಜನೆಗೆ ಅನುಮೋದನೆಯನ್ನು ಸಂಪುಟ ನೀಡಿದೆ ಎಂದರು.
ಇನ್ನೂ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 200 ಕೋಟಿ ಮೊತ್ತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಮುಳ್ಕೋಡು ಗ್ರಾಮದ ಬಳಿ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಮೇಲ್ದರ್ಜೇಗೇರಿಕೆ ನಿರ್ಧರಿಸಿದೆ. ಗ್ರೇಡ್-1 ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಿದೆ. ಕೆಲವು ಅಕ್ಕಪಕ್ಕದ ಗ್ರಾಮಗಳ ಸೇರ್ಪಡೆಗೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.
ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ 100 ಕೋಟಿ ಮೊತ್ತದಲ್ಲಿ BSWML ಮೂಲಕ ಅನುಷ್ಠಾನವಾಗಲಿದೆ. ತಿಪ್ಪಗೊಂಡನಹಳ್ಳಿ ಜಲಾನಯನದ ಬಫರ್ ಜೋನ್ ಮರುನಿಗದಿಗೆ ಒಪ್ಪಿಗೆ ನೀಡಿದೆ. ಕರ್ನಾಟಕ ವಿವಿ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಕಲಬುರಗಿಯಲ್ಲಿ 12 ಕೋಟಿ ಮೊತ್ತದ ಯೋಜನೆ ನೀಡಲಾಗಿದೆ. ಲೀಪ್ ಆಧಾರದಲ್ಲಿ ಉತ್ಕೃಷ್ಟ ಕೇಂದ್ರ ಸ್ಥಾಪನೆಗೆ ನಿರ್ಧರಿಸಿದೆ. ಇದಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದರು.
ಕಬ್ಬಿಣದ ಅದಿರು ನೀತಿ-2025ಕ್ಕೆ ಒಪ್ಪಿಗೆಯನ್ನು ಸಂಪುಟ ನೀಡಿದೆ. ಜಿಲ್ಲೆಗಳಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ಸಹಕಾರ ಸಂಘ ಸ್ಥಾಪನೆಗೂ ನಿರ್ಧರಿಸಲಾಗಿದೆ. ನ್ಯಾಯಾಂಗ ಸೇವೆ ನಿಯಮಗಳಿಗೆ ತಿದ್ದುಪಡಿಗೆ ಒಪ್ಪಿಗೆಯನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನೀಡಲಾಗಿದೆ ಎಂದು ತಿಳಿಸಿದರು.
ಹಲವು ಯೋಜನೆಗಳಿಗೆ ಸಂಪುಟ ಒಪ್ಪಿಗೆ ನೀಡಲಾಗಿದೆ. ರಾಜ್ಯ ದತ್ತಾಂಶ ಕೇಂದ್ರದ ಕಾರ್ಯಾಚರಣೆ ವಿಪತ್ತು ಹಾಗೂ ಚೇತರಿಕಾ ಕೇಂದ್ರದ ನಿರ್ವಹಣಾ ಸೇವೆ ಎರಡು ಸೇವೆ ನೀಡುವ ಸಂಸ್ಥೆಯ ಆಯ್ಕೆಗೆ ಒಪ್ಪಿಗೆ ನೀಡಲಾಗಿದೆ. 143.6 ಕೋಟಿ ವೆಚ್ಚದಲ್ಲಿ 5 ವರ್ಷದ ಅವಧಿಗೆ ಒಪ್ಪಿಗೆ ಸೂಚಿಸಲಾಗಿದೆ.
ರಾಜ್ಯ ಹಜ್ ಸಮಿತಿ ನಿಯಮಾವಳಿಗೆ ಒಪ್ಪಿಗೆ ಸೂಚಿಸಲಾಗಿದೆ. ಹಿಂಡಲಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ 20 ಗುಂಟೆ ಜಾಗ ಕಾಂಗ್ರೆಸ್ ಟ್ರಸ್ಟ್ ಗೆ ನೀಡಲು ಸಮ್ಮತಿಸಲಾಗಿದೆ. ಕುದೂರಿನಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 3.12 ಎಕರೆ ಭೂಮಿ ಉಚಿತ ನೀಡಲು ಒಪ್ಪಿಗೆ ನೀಡಿದೆ. ಕೆಎಸ್ ಆರ್ ಟಿಸಿಗೆ ಭೂಮಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದರು.
ಮುಧೋಳದಲ್ಲಿ ಕಾಂಗ್ರೆಸ್ ಭವನ ನಿರ್ಮಣಕ್ಕೆ ಜಾಗ. ಝಂಜರಕೊಪ್ಪ ಗ್ರಾಮದಲ್ಲಿ 1077 ಚ.ಮೀ.ಜಾಗ ನೀಡಲಾಗುತ್ತಿದೆ. ಕಾಂಗ್ರೆಸ್ ಟ್ರಸ್ಟ್ ಗೆ ಜಾಗ ನೀಡಲು ಸಮ್ಮತಿಸಲಾಗಿದೆ. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನೀತಿಗೆ ಅನುಮೋದನೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಕ್ಕೆ ಒಪ್ಪಿಗೆ ನೀಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.
ಚಂದ್ರಗುತ್ತಿ ರೇಣುಕಾಂಬ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಗಂಗಾವತಿಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣಕ್ಕಾಗಿ 17.50 ಕೋಟಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕೆಕೆಆರ್ ಟಿಸಿಯಿಂದ ನಿರ್ಮಿಸಲು ಅನುಮತಿ ನೀಡಲಾಗಿದೆ. ವಾಯುವ್ಯ ಕರ್ನಾಟಕ ಸಾರಿಗೆಗೆ ಚಾಲಕರ ನೇಮಕಗೆ ಸಮ್ಮತಿಸಲಾಗಿದೆ. 1000 ಚಾಲಕರ ನೇಮಕಾತಿಗೆ ಒಪ್ಪಿಗೆ ನೀಡಲಾಗಿದೆ. ಕಬಿನಿ ವಿತರಣಾ ನಾಲೆಗಳ ಆಧುನೀಕರಣಕ್ಕಾಗಿ 50 ಕೋಟಿ ವೆಚ್ಚದ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ಸಭೆಯ ಇತರೆ ನಿರ್ಣಯಗಳು ಹೀಗಿವೆ.









