ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದು,ಎಲ್ಲರಿಗೂ ನಮಸ್ಕಾರ, ಜೈ ಶ್ರೀಕೃಷ್ಣ ಎಂದು ಪ್ರಧಾನಿ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಆರಂಭಿಸುತ್ತಿದ್ದಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಭದ್ರತಾ ಸಿಬ್ಬಂದಿ ಮತ್ತು ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗೆ ಕಾರ್ಯಕ್ರಮಕ್ಕೆ ಬಂದ ಮಕ್ಕಳು ರಚಿಸಿದ ತಮ್ಮ ವರ್ಣಚಿತ್ರಗಳನ್ನು ಸಂಗ್ರಹಿಸಲು ಕೇಳಿಕೊಂಡಿದ್ದಾರೆ.
ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.
ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ – ಲಕ್ಷಕಾಂತ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವೀಧಾತ ಬಿರುದು ಸಮರ್ಪಣೆ ಮಾಡಿದ್ದಾರೆ.
ಇದೀಗ ಪ್ರಧಾನಿ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಿದ್ದಾರೆ.
#WATCH | Udupi, Karnataka | PM Narendra Modi asks his security and police personnel on duty to collect paintings of him made by children who have come to attend the event.
Source: DD pic.twitter.com/ofhPgZDATd
— ANI (@ANI) November 28, 2025
#WATCH | Udupi, Karnataka | PM Narendra Modi recites the Bhagwat Gita in unison with over 100,000 participants, including students, monks, scholars, and citizens from various walks of life, during the Laksha Kantha Gita Parayana
Source: DD pic.twitter.com/aMS1gQ1xHB
— ANI (@ANI) November 28, 2025








