ಬೆಂಗಳೂರು : ರಾಜ್ಯದ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ ಸರ್ಕಾರದಿಂದ ಕಾರ್ಮಿಕರಿಗೆ ಹಲವು ಸೌಲಭ್ಯಗಳು ಸಿಗಲಿವೆ.
ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇವರು ಅಪಘಾತಕ್ಕೀಡಾದಾಗ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಾಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ, ಅವರ ದುಡಿಮೆಯನ್ನೇ ಅವಲಂಬಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ. ಇಂತಹ ಕಾರ್ಮಿಕರು / ಅವರ ಕುಟುಂಬದ ಸದಸ್ಯರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ರಾಜ್ಯ ಸರ್ಕಾರವು “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ”ಯನ್ನು ಜಾರಿಗೆ ತಂದಿರುತ್ತದೆ.
ಯೋಜನೆಯ ವಿಶೇಷತೆಗಳು:-
ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ.
ಯೋಜನೆಯು ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸುತ್ತದೆ.
ವಯೋಮಿತಿ 20 ರಿಂದ 70 ವರ್ಷಗಳು.
ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ.
ಯೋಜನೆಯ ಷರತ್ತುಗಳು:-
ಚಾಲಕರು, ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಪಡೆದಿರಬೇಕು.
ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೇಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆ ಇರುವುದಿಲ್ಲ.
ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮಂಡಳಿಯ ನಿಯಮಾನುಸಾರ ಅಧಿಸೂಚಿಸಲ್ಪಟ್ಟ ಅಯಾ ಜಿಲ್ಲೆಯ ನೋಂದಣಿ ಅಧಿಕಾರಿಗಳಿಂದ ಯೋಜನೆಯಡಿ ಫಲಾನುಭವಿಯಾಗಿ ನೋಂದಣಿ ಮಾಡಿಸಿಕೊಳ್ಳಬೇಕು.
ಯೋಜನೆಯ ಸೌಲಭ್ಯಗಳು:-
(ಅ) ಅಪಘಾತ ಪರಿಹಾರ:-
ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದಲ್ಲಿ, ಅವರ ನಾಮನಿರ್ದೇಶಿತರಿಗೆ ರೂ.5 ಲಕ್ಷ ಪರಿಹಾರ.
ಶಾಶ್ವತ ದುರ್ಬಲತೆ ಹೊಂದಿದಾಗ, ಅಪಘಾತದಿಂದ ಪ್ರಮಾಣಕ್ಕನುಗುಣವಾಗಿ ಗರಿಷ್ಠ ರೂ.2 ಲಕ್ಷದ ವರೆಗೆ ಪರಿಹಾರ. ಫಲಾನುಭವಿಗೆ ದುರ್ಬಲತೆಯ
ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ-
ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ. 50,000/- ರವರೆಗೆ; ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಪಾವತಿಸಲಾಗುವುದು.
15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ, ಗರಿಷ್ಠ ರೂ. 1 ಲಕ್ಷದ ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಪಾವತಿಸಲಾಗುವುದು.
ಅಪಘಾತ ಸಂದರ್ಭಗಳಲ್ಲಿ ಕ್ಲೀಮ್ ಅರ್ಜಿ ಸಲ್ಲಿಸುವ ವಿಧಾನ:-
ಪರಿಹಾರ ಮೊತ್ತವನ್ನು ಪಡೆಯಲು ಅಪಘಾತ ಸಂಭವಿಸಿದ ಆರು (6) ತಿಂಗಳ ಒಳಗೆ ಮಂಡಳಿಗೆ ಫಲಾನುಭವಿ/ನಾಮನಿರ್ದೇಶಿತರು ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
ಅಪಘಾತದಿಂದ ಮರಣ ಹೊಂದಿದ ಪ್ರಕರಣಗಳಲ್ಲಿ, ಫಲಾನುಭವಿಯ ನಾಮ ನಿರ್ದೇಶಿತರು ಕ್ಷೇಮ್ ಅರ್ಜಿಯ ಜೊತೆಗೆ ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷಾ ವರದಿ, ಪ್ರಥಮ ಮಾಹಿತಿ ವರದಿ(FIR) ಮತ್ತು ಊರ್ಜಿತ ಚಾಲನಾ ಪರವಾನಗಿ ಯನ್ನು ಲಗತ್ತಿಸಬೇಕು.
3 ಚಾಲನಾ . ಅಪಘಾತದಿಂದ ದುರ್ಬಲತೆ ಉಂಟಾದಲ್ಲಿ ಪ್ಲೇಮ್ ಅರ್ಜಿಯ ಜೊತೆಗೆ ಊರ್ಜಿತ ಪರವಾನಗಿ/ಬ್ಯಾಡ್ಜ್, ಪ್ರಥಮ ಮಾಹಿತಿ ವರದಿ(FIR) ಮತ್ತು ಒಳರೋಗಿ ಆಸ್ಪತ್ರೆ ವೆಚ್ಚ ಹಿಂಪಡೆಯಲು ವೈದ್ಯಕೀಯ ಪ್ರಮಾಣ ಪತ್ರ/ಬಿಲ್‌ಗಳ ಮೂಲ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.
ಸ್ವೀಕರಿಸಿದ ಕ್ಲೀಮ್ ಅರ್ಜಿಯ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿದ್ದಲ್ಲಿ, ಪರಿಹಾರದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
ಶೈಕ್ಷಣಿಕ ಧನ ಸಹಾಯದ ಅರ್ಜಿಗಳನ್ನು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮುಖಾಂತರ ಅಥವಾ ನೇರವಾಗಿ ಮಂಡಳಿಗೆ ಸಲ್ಲಿಸಬಹುದು
ಮಂಡಳಿಯು ಸದರಿ ಅರ್ಜಿಗಳನ್ನು ಪರಿಶೀಲಿಸಿ ಧನ ಸಹಾಯದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡುತ್ತದೆ.
ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಸ್ಥಳೀಯ ಕಾರ್ಮಿಕ ಸೇವಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕ ಬಂಧುಗಳ ಸೇವೆಯನ್ನು ಪಡೆಯಬಹುದು.
(ಆ) ವಾರ್ಷಿಕ ಶೈಕ್ಷಣಿಕ ಧನ ಸಹಾಯ:- ಅಪಘಾತದಿಂದ ಮರಣ ಹೊಂದಿದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಗರಿಷ್ಠ ಇಬ್ಬರು ಮಕ್ಕಳಿಗೆ, 1ನೇ ತರಗತಿ ಯಿಂದ ಪದವಿ ಪೂರ್ವ/12ನೇ ತರಗತಿಯ ವರೆಗೆ ವಾರ್ಷಿಕ ರೂ.10,000/-ಗಳ ಶೈಕ್ಷಣಿಕ ಧನ ಸಹಾಯ ಲಭ್ಯ.
(ಇ) ಸ್ಮಾರ್ಟ್ ಕಾರ್ಡ್ ಸೌಲಭ್ಯ:-
ಯೋಜನೆಯ ಕುರಿತು ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸಲು, ಸಾರಿಗೆ ಇಲಾಖೆಯಿಂದ ಚಾಲನಾ ಪರವಾನಗಿ ಪಡೆದ ಎಲ್ಲಾ ಖಾಸಗಿ ವಾಣಿಜ್ಯ ಸಾರಿಗೆ ವಾಹನ ಚಾಲಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು.
(ಇ) ಶ್ರಮ ಸಮ್ಮಾನ್, ವಿಶೇಷ ಪ್ರಶಸ್ತಿ ಮತ್ತು ಸಮಾಧಾನಕರ ಪ್ರಶಸ್ತಿ:-
ಸುರಕ್ಷತಾ ಚಾಲನೆಯನ್ನು ಉತ್ತೇಜಿಸುವ ಉದ್ದೇಶದಿಂದ, ಉತ್ತಮ ಹಾಗೂ ಸುರಕ್ಷತಾ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ, ಪ್ರತಿ ವರ್ಷ ಮಾರ್ಚ್ 01 ರಂದು ಕಾರ್ಮಿಕ ಸಮ್ಮಾನ ದಿನಾಚರಣೆ ಆಚರಿಸಿ 60 ಚಾಲಕರಿಗೆ “ಶ್ರಮ ಸಮ್ಮಾನ ಪ್ರಶಸ್ತಿ”, 300 ಚಾಲಕರಿಗೆ “ವಿಶೇಷ ಪುರಸ್ಕಾರ” ಹಾಗೂ 1500 ಚಾಲಕರಿಗೆ ಸಮಾದಾನಕರ ಪ್ರಶಸ್ತಿಗಳನ್ನು ವಿತರಿಸಲಾಗುತ್ತಿದೆ.
(ಉ) ಅಪಘಾತ ಜೀವ ರಕ್ಷಕ ಕಾರ್ಯಕ್ರಮ:-
ಅಪಘಾತಕ್ಕೊಳಗಾದ ಸಂತ್ರಸ್ತರಿಗೆ ಕೂಡಲೇ ಪ್ರಥಮ ಚಿಕಿತ್ಸೆಯನ್ನು ನೀಡಿ, ಹತ್ತಿರದ ಆಸ್ಪತ್ರೆಗೆ ಸೇರಿಸಿ, ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಆ ಮೂಲಕ ಗಾಯಾಳುವಿನ ಪ್ರಾಣ ರಕ್ಷಣೆಯನ್ನು ಮಾಡುವುದನ್ನು ಉತ್ತೇಜಿಸುವ ದೃಷ್ಟಿಯಿಂದ “ಅಪಘಾತ ಜೀವ ರಕ್ಷಕ ಕಾರ್ಯಕ್ರಮ”ವನ್ನು ಜಾರಿಗೊಳಿಸುತ್ತಿದ್ದು, ಖಾಸಗಿ ವಾಣಿಜ್ಯ ಸಾರಿಗೆ ವಾಹನ ಚಾಲಕರಿಗೆ ಪ್ರಥಮ ಚಿಕ್ಸಿಸಾ ತರಬೇತಿ ನೀಡಿ, ಅಪಘಾತ ಜೀವ ರಕ್ಷಕರನ್ನಾಗಿ ಸಜ್ಜುಗೊಳಿಸಲಾಗುತ್ತಿದೆ.
> ತರಬೇತಿಯ ಶುಲ್ಕವನ್ನು ಮಂಡಳಿಯೆ ಭರಿಸುತ್ತದೆ
ತರಬೇತಿ ಕಾಲದಲ್ಲಿ ಚಾಲಕರಿಗೆ ಒಂದು ದಿನದ ಭತ್ಯೆ ರೂ.350 ಗಳನ್ನು ನೀಡಲಾಗುತ್ತಿದೆ.
ತರಬೇತಿ ಪಡೆದ ಚಾಲಕರಿಗೆ ಸುಸಜ್ಜಿತ ಪ್ರಥಮ ಚಿಕಿತ್ಸಾ ಕಿಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ.
ಅಪಘಾತದ ಗಾಯಾಳುವನ್ನು ರಕ್ಷಿಸಿದಲ್ಲಿ ರೂ. 1000 ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ.









