ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಇದೀಗ ಮಂಗನ ಕಾಯಿಲೆ ಭೀತಿ ಮತ್ತೆ ಆರಂಭವಾಗಿದ್ದು, ಇದೀಗ 54 ವರ್ಷದ ಮಹಿಳೆಯೊಬ್ಬರಿಗೆ ಮಂಗನ ಕಾಯಿಲೆ ರೋಗ ದೃಢವಾಗಿರುವುದು ವರದಿಯಾಗಿದೆ.
ಹೌದು, ಹೊಸನಗರದ ಮಹಿಳೆಗೆ ಮಂಗನ ಕಾಯಿಲೆ (ಕೆಎಫ್‌ಡಿ) ದೃಢಪಟ್ಟಿದೆ. ಕೆಎಫ್‌ಡಿ ಪತ್ತೆಗೆ ಪರೀಕ್ಷೆಗಳನ್ನು ನಡೆಸುತ್ತಿದ್ದಾಗ ಹೊಸನಗರದ 54 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಸದ್ಯ ಮಹಿಳೆಗೆ ಚಿಕಿತ್ಸೆ ಆರಂಭಿಸಲಾಗಿದೆ. ಸದ್ಯ ಅವರು ಗುಣಮುಖರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮಂಗನ ಕಾಯಿಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದರು.








