ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದ್ದು ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯ ತೋಟದ ಗುಡ್ಡದ ಹಳ್ಳಿಯಲ್ಲಿ ಈ ಒಂದು ಆತ್ಮಹತ್ಯೆ ಪ್ರಕರಣ ನಡೆದಿದೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸೌಭಾಗ್ಯ (31) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಅಷ್ಟೇ ಸೌಭಾಗ್ಯಪತಿ ಮೃತಪಟ್ಟಿದ್ದರು. ಪತಿ ಕಳೆದುಕೊಂಡು ಸೌಭಾಗ್ಯ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸೌಭಾಗ್ಯ ಇಬ್ಬರೂ ಮಕ್ಕಳ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೇವಸ್ಥಾನದಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಟ್ಟಿದ್ದರು. ದೇವಸ್ಥಾನ ಹಾಗೂ ಮನೆ ಬಿಟ್ಟರೆ ಎಲ್ಲೂ ಹೋಗುತ್ತಿರಲಿಲ್ಲ ಈ ಒಂದು ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








