ಬೆಂಗಳೂರು : ಬೆಂಗಳೂರಲ್ಲಿ ಅತೀ ದೊಡ್ಡ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತ ಎಲ್ಲ 9 ಆರೋಪಿಗಳನ್ನು ಪೊಲೀಸರು ಮತ್ತೆ ಕಸ್ಟಡಿಗೆ ಪಡೆದಿದ್ದಾರೆ.ಇಂದು ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆರೋಪಿಗಳನ್ನು ಕೋರ್ಟ್ ಹಾಜರುಪಡಿಸಿದ್ದರು.
ವಿಚಾರಣೆ ಬಳಿಕ ಪೊಲೀಸರು ಹೆಚ್ಚಿನ ವಿಚಾರಣೆಗೆ ಎಂದು ಮತ್ತೆ ಕಸ್ಟಡಿಗೆ ಪಡೆದುಕ್ಕೊಂಡಿದ್ದಾರೆ. 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಮತ್ತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ತನಿಖೆ, ಮಹಜರು, ವಿಚಾರಣೆ ಹಿನ್ನೆಲೆಯಲ್ಲಿ ಮತ್ತಷ್ಟು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.








