ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುರ್ಚಿ ಕದನಕ್ಕೆ ಫುಲ್ ಸ್ಟಾಪ್ ಹಾಕಿದ್ದರು.
ಮತದ ಬಳಿಕ ಎಂದು ಬೆಂಗಳೂರಿನ ಸದಾಶಿವನಗರ್ದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಉಪಹಾರಕೂಟಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಭಾರಕೂಟಕ್ಕೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಸಹ ತಿಳಿಸಿದ್ದರು.
ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನಗೆ ಬರುವುದಾಗಿ ತಿಳಿಸಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು ವಿಪಕ್ಷ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ.
ಸಿಎಂ ಫೆವರೇಟ್ ನಾಟಿ ಕೋಳಿ ಸಾರು, ಉಪಹಾರ ರೆಡಿ!
ಸಿದ್ದರಾಮಯ್ಯ ಅವರು ಡಿಸಿಎಂ ನಿವಾಸಕ್ಕೆ ತೆರಳುವುದು ಖಚಿತವಾಗಿದೆ. ಇದರ ಬೆನ್ನಲ್ಲೆ ಡಿಕೆಶಿ ಅವರ ಮನೆಯಲ್ಲಿ ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಕನಕಪುರದಿಂದ ನಾಟಿ ಕೋಳಿಗಳನ್ನು ತರಲಾಗಿದೆ. ಮುಖ್ಯಮಂತ್ರಿಗಳಿಗೆ ನಾಟಿ ಕೋಳಿ ಸಾರು ಇಷ್ಟ. ನಾಳೆಯ ಉಪಹಾರದಲ್ಲಿ ವೆಜ್ ಜೊತೆಗೆ ನಾಜ್ ವೆಜ್ ಉಪಹಾರ ಸಹ ಇರಲಿದೆ. ಇಡ್ಲಿ, ಪೂರಿ, ಸಿಹಿ ತಿಂಡಿ ಜೊತೆಗೆ ನಾಟಿ ಕೋಳಿ ಸಾರು ಸಹಿತ ಸಿದ್ಧವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.








