ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಹಲವು ವರ್ಷಗಳಿಂದ ಬಾಂಗ್ಲಾದೇಶದ ಸಾರ್ವಜನಿಕ ಜೀವನಕ್ಕೆ ಕೊಡುಗೆ ನೀಡಿದ ಬೇಗಂ ಖಲೀದಾ ಜಿಯಾ ಅವರ ಆರೋಗ್ಯದ ಬಗ್ಗೆ ತಿಳಿದು ತೀವ್ರ ಕಳವಳ ವ್ಯಕ್ತಪಡಿಸಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
‘ಅವರು ಶೀಘ್ರ ಗುಣಮುಖರಾಗಲಿ ಎಂದು ನಮ್ಮ ಪ್ರಾಮಾಣಿಕ ಪ್ರಾರ್ಥನೆ ಮತ್ತು ಶುಭ ಹಾರೈಕೆಗಳು’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
‘ನಮ್ಮಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಭಾರತ ಸಿದ್ಧವಿದೆ’ ಎಂದು ಅವರು ಹೇಳಿದರು.
ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಅಧ್ಯಕ್ಷೆ 80 ವರ್ಷದ ಜಿಯಾ ಅವರನ್ನು ನವೆಂಬರ್ 23 ರಂದು ಎದೆಯ ಸೋಂಕಿಗೆ ಒಳಗಾದ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.








