ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಡನೆಗಳಡಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣುಗಳನ್ನು ನೀಡಲುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಆಹಾರದ ಪ್ರಮಾಣ ಮತ್ತು ಘಟಕ ವೆಚ್ಚಕ್ಕೆ ಅನುಗುಣವಾಗಿ 2019-20ನೇ ಸಾಲಿನಿಂದ ಮಧ್ಯಾಹ್ನದ ಉಪಹಾರ ಯೋಜನೆಯಿ ಬೆಳಗಿನ ಉಪಹಾರ, ಬಿಸಿಹಾಲು ಮತ್ತು ಮಧ್ಯಾಹ್ನ ಬಿಸಿಯೂಟ ಒದಗಿಸಲು ಅನುಮೋದನೆ ನೀಡಲಾಗಿರುತ್ತದೆ ಎಂದಿದ್ದಾರೆ.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವತಿಯಿಂದ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ಶಾಲೆಗಳನ್ನು ಒಳಗೊಂಡಂತೆ ಪಿಎಂಶ್ರೀ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 2018-19ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು 2025-26ನೇ ಸಾಲಿನ ಅಯವ್ಯಯ ಭಾಷಣದಂತೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ 01-12-2025ರಿಂದ ಅನ್ವಯವಾಗುವಂತೆ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣುನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಅನುಮತಿ ನೀಡಿ ಆದೇಶಿಸಿದ್ದಾರೆ.








