ಶಿವಮೊಗ್ಗ: ಜನರ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಜನರ ಬಳಿಗೆ ಸರ್ಕಾರ ಕೊಂಡೊಯ್ಯುವಂತ ಕೆಲಸವನ್ನು ಶಾಸಕ ಗೋಬಾಲಕೃಷ್ಣ ಬೇಳೂರು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಡಿಸೆಂಬರ್.4ರಂದು ಜನ ಸಂಪರ್ಕ ಸಭೆಯನ್ನು ನಿಗದಿ ಪಡಿಸಿದ್ದಾರೆ.
ಈ ಕುರಿತಂತೆ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಿಸೆಂಬರ್.4, 2024ರಂದು ಬೆಳಗ್ಗೆ 11 ಗಂಟೆಗೆ ಸಾಗರನ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಾಗರ ನಗರದ ಜನತೆಯ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹರಿಸುವಂತ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ.

ಬೆಳಗ್ಗೆ 9.30ರಿಂದಲೇ ಸಾರ್ವಜನಿಕರ ಅಹವಾಲುಗಳಿಗೆ ಅರ್ಜಿ ಸ್ವೀಕಾರ ನಡೆಯಲಿದೆ. ಸಾಗರ ನಗರದ ಜನರು ಸ್ವಚ್ಛತೆ, ನೈರ್ಮಲ್ಯ, ವಿದ್ಯುತ್, ಕುಡಿಯುವ ನೀರು, ಮೂಲಭೂತ ಸೌಕರ್ಯ ಮತ್ತು ನಾಗರೀಕ ಸೇವೆಗಳು, ಇ-ಆಸ್ತಿ ಮತ್ತು ಇತರೆ ಯೋಜನೆಗಳು, ನಗರ ಪ್ರದೇಶಕ್ಕೆ ಸಂಬಂಧಿಸಿದ ಇತರೆ ಸಾರ್ವಜನಿಕ ಸಮಸ್ಯೆ ಬಗ್ಗೆ ಅರ್ಜಿಯನ್ನು ನೀಡಬಹುದು. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಪರಿಶೀಲಿಸಿ ಪರಿಹರಿಸುವಂತ ಕೆಲಸವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಈ ಸಭೆಯಲ್ಲಿ ಆಡಳಿತಾಧಿಕಾರಿಗಳು, ಸಾಗರ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳು ಹಾಜರಿರಲಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸೋ ಕೆಲಸವಾಗಲಿದೆ. ಹೀಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಡಿಸೆಂಬರ್.4, 2025ರ ಗುರುವಾರದಂದು ಸಾಗರ ನಗರಸಭೆ ಆವರಣದಲ್ಲಿ ನಡೆಯುವಂತ ಜನ ಸಂಪರ್ಕ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ…, ಸಂಪಾದಕರು








