ಕೆ.ಆರ್ದ.ಪೇಟೆ : ರಾಜ್ಯದಲ್ಲಿ ಸಂಕ್ರಾಂತಿ ನಂತರ ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮಕರ ಸಂಕ್ರಾಂತಿ ನಂತರ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ, ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಹೇಳಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿಯೂ ಕೂಡ ಯುಗಾದಿ ನಂತರ ಸಮಸ್ಯೆ ಎದುರಾಗಲಿವೆ, ಶಿವನ ಮುಡಿಯ ಮೇಲಿರುವ ಮಲ್ಲಿಗೆ ಶಿವನ ಪಾದಕ್ಕೆ ರಾಜಕಾರಣದ ಗೊಂದಲವು ಬೀಳಲೇಬೇಕು. ಮಕರ ಸಂಕ್ರಾಂತಿ ಬಳಿಕ ಸಂಪೂರ್ಣವಾಗಿ ಬಗೆಹರಿಯಲಿದ್ದು, ಸುಖಾಂತ್ಯವಾಗಲಿದೆ ಎಂದು ಹೇಳಿದ್ದಾರೆ.








