ಸಿದ್ದಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರದ ಬಳಿಯ ಬಾಗಲಕೋಟೆ-ವಿಜಯಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಬ್ಬಿನ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ಜಮಖಂಡಿ ತಾಲೂಕಿನ ಸಿದ್ದಾಪುರದವರು ಎನ್ನಲಾಗಿದೆ. ಮೃತರನ್ನು ವಿಶ್ವನಾಥ ಕಂಬಾರ(17), ಗಣೇಶ ಅರಳಿಮಟ್ಟಿ(20), ಪ್ರವೀಣ್ ಶೇಡಬಾಳ(22), ಪ್ರಜ್ವಲ್ ಶೇಡಬಾಳ(17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








