ಶಿವಮೊಗ್ಗ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ ಮರುದಿನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಮೇಶ್(30) ಮೃತಪಟ್ಟವರು.
ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತಿಯನ್ನು ರಮೇಶ್ ಮದುವೆಯಾಗಿದ್ದರು. ವಧುವಿನ ಮನೆಗೆ ನವ ದಂಪತಿ ತೆರಳಿದ್ದಾರೆ. ದೇವರ ಕೋಣೆಗೆ ಹೋಗಿ ಕೈಮುಗಿದು ಹೊರ ಬರುತ್ತಿದ್ದಂತೆ ರಮೇಶ್ ಹೃದಯಾಘಾತದಿಂದ ಕುಸಿತು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ.








