ಬೆಂಗಳೂರು : ನಿನ್ನೆವರೆಗೂ ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ರಾಜಕೀಯ ಜೋರಾಗಿತ್ತು. ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಹ್ವಾನ ನೀಡಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಸಿಎಂ ಬದಲಾವಣೆಗೆ ಬ್ರೇಕ್ ಹಾಕಿದ್ದರು. ಇನ್ನು ನಿನ್ನೆ ಡಿಕೆ ಶಿವಕುಮಾರ್ ತಮ್ಮ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಡಿಸಿಎಂ ಡಿಕೆ ಶಿವಕುಮಾರ್ ಬ್ರದರ್ಸ್. ನಮ್ಮ ಪಕ್ಷವು ಒಂದೇ, ಸಿದ್ಧಾಂತವು ಒಂದೇ ಎಂದು ಹೇಳುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಇದೀಗ ಇಂದು ಮಾಧಹ್ನ 3 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಹಾಗಾಗಿ ಹೈಕಮಾಂಡ್ ಅವರನ್ನು ಭೇಟಿ ಮಾಡ್ತಾರಾ ಎನ್ನುವ ಕುತೂಹಲ ಮೂಡಿಸಿದೆ.








