ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಾಲಾ ವಿದ್ಯಾರ್ಥಿಗಳ Aadhar Mandatory Biometric Update (Aadhar MBU) ಹಾಗೂ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ (1)ರಲ್ಲಿನ ದಿನಾಂಕ:16.07.2025ರ ಸಭಾ ನಡವಳಿಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, AJSK ಮತ್ತು EDCS ಸಹಯೋಗದೊಂದಿಗೆ, ವಾರ್ಷಿಕವಾಗಿ ಸುಮಾರು 20 ಲಕ್ಷ MBU ಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಶಾಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲು ಪ್ರಸ್ತಾಪಿಸಲಾಗಿರುವುದಾಗಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯನ್ನು ಯುಐಡಿಎಐ ಅಡಿಯಲ್ಲಿ ರಾಜ್ಯ ರಿಜಿಸ್ಟ್ರಾರ್ ಆಗಿ ನೇಮಿಸಲು, 300-500 ಇಸಿಎಂಪಿ ಕಿಟ್‌ಗಳನ್ನು ಸಂಗ್ರಹಿಸಲು ಮತ್ತು ಶಾಲಾ ಅಧಿಕಾರಿಗಳಿಗೆ ತರಬೇತಿ ನೀಡಲು ಅಥವಾ ಪ್ರಮಾಣೀಕೃತ ನಿರ್ವಾಹಕರ ಮೂಲಕ ವಿದ್ಯಾರ್ಥಿಗಳ ಆಧಾರ್ MBU ಕಾರ್ಯವನ್ನು ನಡೆಸಲು ಒಂದು ವ್ಯವಸ್ಥೆಯನ್ನು ರೂಪಿಸಲು ಪ್ರಸ್ತಾಪಿಸಲಾಗಿದೆ.
ಮೇಲೆ ಓದಲಾದ (2)ರಲ್ಲಿನ, ದಿನಾಂಕ:16.09.2025ರ ಸಭಾ ನಡವಳಿಯಲ್ಲಿ, ಸರ್ಕಾರಿ ಶಾಲಾ-ಕಾಲೇಜುಗಳನ್ನು ನೋಂದಣಿ ಅಥವಾ ದಾಖಲಾತಿ ಏಜೆನ್ಸಿಗಳನ್ನಾಗಿ ಮಾಡಲಾಗುವುದಿಲ್ಲ ಎಂದು ತೀರ್ಮಾನಿಸಿದೆ. ಮುಂದುವರೆದು, ಸಿ.ಇ.ಜಿ.ಗೆ ಆಧಾರ್ MBU ಪ್ರಗತಿಯನ್ನು ಸಾಧಿಸಲು, ಶಾಲಾ ಶಿಕ್ಷಣ ಇಲಾಖೆಯು ಅಗತ್ಯವಿರುವ ಎಲ್ಲಾ ಬೆಂಬಲವನ್ನು ಒದಗಿಸಲಾಗುವುದು ಎಂದು ತಿರ್ಮಾನಿಸಲಾಗಿದೆ.ಅದರಂತೆ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಶಾಲಾ ವಿದ್ಯಾರ್ಥಿಗಳ Aadhar MBU (Mandatory Biometric Update) ಸಂಬಂಧಿಸಿದಂತೆ ರಾಜ್ಯ ಮಟ್ಟದಲ್ಲಿ ಸಮಿತಿಯನ್ನು ರಚಿಸುವುದು ಮತ್ತು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸುವುದು ಎಂಬ ನಿರ್ದೇಶನಗಳನ್ನು ತಿಳಿಯಲಾಗಿದೆ.
ಮೇಲೆ ಓದಲಾದ (3) ರಲ್ಲಿ ಪತ್ರದಂತೆ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಹೊರಡಿಸಿರುವ ನಿರ್ದೇಶನಗಳಿಗೆ ಅನುಗುಣವಾಗಿ, 5 ವರ್ಷ ಮತ್ತು 15 ವರ್ಷ ವಯಸ್ಸನ್ನು ತಲುಪಿದ ಎಲ್ಲಾ ವಿದ್ಯಾರ್ಥಿಗಳು ಆಧಾರ್ ಕಡ್ಡಾಯ ಬಯೋಮೆಟ್ರಿಕ್ ನವೀಕರಣವನ್ನು (ಎಂಬಿಯು) ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ. ಶಾಲಾ ಶಿಕ್ಷಣ ಇಲಾಖೆಯಲ್ಲಿ ಹಲವಾರು ವಿದ್ಯಾರ್ಥಿಗಳ Aadhar Mandatory Biometric Update (Aadhar MBU) w ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿವಿಧ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಇನ್ನು ಹಲವಾರು ಕೇಂದ್ರ/ ರಾಜ್ಯ ಕಾರ್ಯಕ್ರಮಗಳ ಪ್ರಯೋಜನಗಳು ದೊರಕುವುದು ವಿಳಂಬವಾಗಿರುತ್ತದೆ.
ಮೇಲ್ಕಂಡ ಎಲ್ಲಾ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ. ಆಧಾರ್ ಕಡ್ಡಾಯ ಬಯೋಮೆಟ್ರಿಕ್ ನವೀಕರಣ (ಆಧಾರ್) MBU) ಸಂಬಂಧಿಸಿದಂತೆ ಕ್ರಮವಹಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಈ ಕೆಳಕಂಡಂತೆ ರಾಜ್ಯ ಮಟ್ಟದ ಸಮಿತಿಯನ್ನು ಹಾಗೂ ಆಯಾ ಜಿಲ್ಲೆಗಳ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ಈ ಕೆಳಕಂಡಂತೆ ರಚಿಸಿ ಆದೇಶಿಸಿದೆ.









