ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯಿದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 202’ಕ್ಕೆ ಅನು ಮೋದನೆ ಪಡೆಯುವ ಸಾಧ್ಯತೆಯಿದೆ. ಜೂನ್‌ನಲ್ಲಿನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಕರಡು ವಿಧೇಯಕ ಪ್ರಸ್ತಾಪಿಸಲಾಗಿದ್ದು, ಅಂತಿಮ ವಿಧೇಯಕವು ಇಂದು ಮಂಡನೆಯಾಗಲಿದೆ.
ಬಳಿಕ ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸುವ ಸಾಧ್ಯತೆಯಿದೆ. ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥ ವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡ ಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ರೂ. ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.








