ಬೆಂಗಳೂರು : ಈ ಬಾರಿ ಉತ್ತಮ ಮಳೆಯಿಂದಾಗಿ ಮಂಡ್ಯ, ಮೈಸೂರು ಭಾಗದಲ್ಲಿ ಭತ್ತದ ಬೆಳೆಯಲ್ಲಿ ಉತ್ತಮ ಫಸಲು ಬಂದಿದೆ. ಆದರೆ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸದೆ, ಸೂಕ್ತ ಬೆಲೆ ಕೊಡದೆ, ದಾಸ್ತಾನಿಗೆ ಜಾಗವಿಲ್ಲ, ತೇವಾಂಶ ಜಾಸ್ತಿ ಇದೆ ಎಂದು ಎಂದಿನಂತೆ ಅನ್ನದಾತರನ್ನು ಸತಾಯಿಸುತ್ತಿದೆ ಈ ರೈತ ವಿರೋಧಿ @INCKarnataka ಸರ್ಕಾರ.
ಸಿಎಂ @siddaramaiah ನವರೇ,
ಕೇಂದ್ರ ಸರ್ಕಾರ ಕ್ವಿಂಟಲ್ ಭತ್ತಕ್ಕೆ ₹2362 ಬೆಂಬಲ ಬೆಲೆ ಘೋಷಿಸಿದೆ. ಕೇರಳ, ಒಡಿಸ್ಸಾ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ನೀಡುತ್ತಿರುವಂತೆ ರಾಜ್ಯ ಸರ್ಕಾರದ ವತಿಯಿಂದ ಕ್ವಿಂಟಲ್ ಭತ್ತಕ್ಕೆ ₹500 ಪ್ರೋತ್ಸಾಹ ಧನವಾಗಿ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರಗಳ ಮೂಲಕ ಭತ್ತ ಖರೀದಿ ಮಾಡಿ ರೈತರ ನೆರವಿಗೆ ಬನ್ನಿ.
ತೇವಾಂಶ ಕಡಿಮೆ ಮಾಡಿಕೊಂಡು ಬನ್ನಿ, ದಾಸ್ತಾನಿಗೆ ಸ್ಥಳವಿಲ್ಲ ಎನ್ನುವ ಕುಂಟು ನೆಪಗಳನ್ನು ಕೊಡುವುದು ಬಿಟ್ಟು, ಪಂಜಾಬ್ ಇನ್ನಿತರ ರಾಜ್ಯಗಳ ಮಾದರಿಯಲ್ಲಿ ಭತ್ತ ಖರೀದಿ ಕೇಂದ್ರಗಳಲ್ಲೇ ಒಣಗಿಸುವ ಯಂತ್ರ ಅಳವಡಿಸಿ ಖರೀದಿ ಪ್ರಕ್ರಿಯೆ ತ್ವರಿತಗೊಳಿಸಿ.
ನಿಮ್ಮ ಸರ್ಕಾರದ ಈ ರೈತ ವಿರೋಧಿ ಧೋರಣೆ ಭತ್ತ ಖರೀದಿಯಲ್ಲೂ ಮುಂದುವರೆದರೆ ಈ ಬಾರಿ ರೈತರ ಕೆಂಗಣ್ಣಿಗೆ ಗುರಿಯಾಗಿ ಸರ್ಕಾರ ಬೀಳುವುದು ಗ್ಯಾರೆಂಟಿ ಎಂದು ವಾಗ್ದಾಳಿ ನಡೆಸಿದ್ದರೆ.
ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆದು ರೈತರು ಮತ್ತೊಮ್ಮೆ ಬೀದಿಗಿಳಿದು ಪ್ರತಿಭಟಸಬೇಕಾದ ಅನಿವಾರ್ಯತೆ ತಪ್ಪಿಸಿ!
ಈ ಬಾರಿ ಉತ್ತಮ ಮಳೆಯಿಂದಾಗಿ ಮಂಡ್ಯ, ಮೈಸೂರು ಭಾಗದಲ್ಲಿ ಭತ್ತದ ಬೆಳೆಯಲ್ಲಿ ಉತ್ತಮ ಫಸಲು ಬಂದಿದೆ. ಆದರೆ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸದೆ, ಸೂಕ್ತ ಬೆಲೆ ಕೊಡದೆ, ದಾಸ್ತಾನಿಗೆ ಜಾಗವಿಲ್ಲ, ತೇವಾಂಶ ಜಾಸ್ತಿ ಇದೆ… pic.twitter.com/9fDalVwkfE
— R. Ashoka (@RAshokaBJP) December 4, 2025








