ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕೆಲ ಮಹತ್ವದ ಮಸೂದೆಗಳಿಗೆ ಅನುಮೋದನೆ ನೀಡಲಾಯಿತು. ಆ ಮಸೂದೆಗಳ ವಿವರ ಈ ಕೆಳಗಿನಂತಿದೆ.
ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳ ವಿವರ…
ಒಳಾಡಳಿತ ಇಲಾಖೆ:
1 “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025ಕ್ಕೆ ಅನುಮೋದನೆ ನೀಡಿದೆ.
ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ:
2.ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ ನೀಡಿದೆ.
3. “ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ನೀಡಿದೆ.
ಕಂದಾಯ ಇಲಾಖೆ:
4. “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ ನೀಡಿದೆ.
5. “ಶ್ರೀ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ ನೀಡಿದೆ.
ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ:
6. “ಕರ್ನಾಟಕ ಒಳನಾಡು ನೌಕೆ ನಿಯಮಗಳು, 2025″ಕ್ಕೆ ಅನುಮೋದನೆ ನೀಡಿದೆ.
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ:
7 “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ನೀಡಿದೆ.
ಸಮಾಜ ಕಲ್ಯಾಣ ಇಲಾಖೆ:
8.“ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) 8 ವಿಧೇಯಕ, 2025”ಕ್ಕೆ ಅನುಮೋದನೆ ನೀಡಿದೆ.








