ಬೆಂಗಳೂರು : ಬೆಂಗಳೂರಿನಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಮೂವರ ಪೈಕಿ ಓರ್ವ ಈ ಕೃತ್ಯ ಎಸಗಿದ್ದಾನೆ.
ಮೊಮೋಸ್ ಶಾಪ್ ಹುಡುಗನ ಮೇಲೆ ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ್ದಾನೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಯಾವ ಕಾರಣಕ್ಕಾಗಿ ಗಲಾಟೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








