ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಕೊಲೆಗೈದು ದುಷ್ಕರ್ಮಿಗಳು ಪರಾಗಿದ್ದಾರೆ.
ರಸ್ತೆಯಲ್ಲಿ ಹೋಗುತ್ತಿದ್ದವನ ಮೇಲೆ ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ದೀಪಕ್ ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








