ಬೆಂಗಳೂರು : ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಡಿಸೆಂಬರ್ 06 ರಂದು ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಕಡ್ಡಾಯವಾಗಿ ಆಚರಿಸುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶಿಸಿರುವ ಅವರು, ಡಿಸೆಂಬರ್ 06, 2025 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲ ಕಚೇರಿಗಳಲ್ಲಿ ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾರ್ಚನೆ ಮಾಡಿ, ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಭಾರತರತ್ನ, ಸಂವಿಧಾನಶಿಲ್ಲ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ವನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ.








