ಬೆಂಗಳೂರು: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಲಾಗಿದೆ. ಹಾಗಾದ್ರೇ 2026ನೇ ಸಾಲಿಗೆ ಮಂಜೂರಾದ ಸಾರ್ವತ್ರಿಕೆ ರಜಾ ದಿನಗಳು ಹಾಗೂ ಪರಿಮಿತ ರಜಾ ದಿನಗಳ ಅಧಿಕೃತ ಪಟ್ಟಿಯನ್ನು ಮುಂದಿದೆ ನೋಡಿ..
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಸಾರ್ವಜನಿಕರಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ.
ಪ್ರತಿ ತಿಂಗಳ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರ ರಜೆಯ ಜೊತೆಗೆ 20 ಸಾರ್ವತ್ರಿಕ ರಜೆ, 21ಪರಿಮಿತ ರಜೆ ನಿಗದಿಪಡಿಸಲಾಗಿದೆ.
ಫೆಬ್ರವರಿ 15 ಮಹಾಶಿವರಾತ್ರಿ, ಅಕ್ಟೋಬರ್ 25 ಮಹರ್ಷಿ ವಾಲ್ಮೀಕಿ ಜಯಂತಿ, ನವೆಂಬರ್ 1 ಕನ್ನಡ ರಾಜ್ಯೋತ್ಸವ, ನವೆಂಬರ್ 8 ನರಕ ಚತುರ್ದಶಿ ಹಬ್ಬ ಭಾನುವಾರ ಬಂದಿದ್ದರೆ, ಮಹಾಲಯ ಅಮಾವಾಸ್ಯೆ ಅಕ್ಟೋಬರ್ 10ರ ಎರಡನೇ ಶನಿವಾರ ಬಂದಿದೆ.
ಈ ಪಟ್ಟಿಯಲ್ಲಿರುವಂತೆ ಮುಸ್ಲಿಮರ ಹಬ್ಬಗಳು ನಿಗದಿತ ದಿನಾಂಕದಂದು ಆಚರಣೆಯಾಗದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸ್ಲಿಂ ಸಮುದಾಯದವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿನ ರಜೆ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಸೆಪ್ಟೆಂಬರ್ 3ರಂದು ಕೈಲ್ ಮುಹೂರ್ತ, ಅಕ್ಟೋಬರ್ 18ರಂದು ತುಲಾ ಸಕ್ರಮಣ, ನವೆಂಬರ್ 28ರಂದು ಹುತ್ತರಿ ಹಬ್ಬ ಆಚರಿಸಲು ಕೊಡಗು ಜಿಲ್ಲೆಗಷ್ಟೇ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಶಿಕ್ಷಣ ಇಲಾಖೆಗೆ ಸಂಬಂಧಿಸಿದ ರಜೆಗಳಿಗೆ ಅನ್ವಯವಾಗುವಂತೆ ಪ್ರತ್ಯೇಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಲಿದ್ದಾರೆ.
ಸಾರ್ವತ್ರಿಕ ರಜಾ ದಿನಗಳ ಜೊತೆಗೆ ಸರ್ಕಾರಿ ನೌಕರರು ಎರಡು ದಿನಗಳಿಗೆ ಮೀರದಂತೆ 2026 ನೇ ಸಾಲಿನ ವರ್ಷಕ್ಕೆ ಘೋಷಿಸಿದ ಪರಿಮಿತ ರಜೆಯನ್ನು ಪೂರ್ವ ಅನುಮತಿ ಪಡೆದು ಬಳಸಿಕೊಳ್ಳಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರ ಇರುವ ಅಧಿಕಾರಿಗಳು ಮಂಜೂರಾತಿ ನೀಡಬೇಕೆಂದು ಸೂಚಿಸಲಾಗಿದೆ.


ಇನ್ನೂ ಅಧಿಸೂಚನೆ 1ರ ಅನುಬಂಧದಲ್ಲಿ 2026ನೇ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಇರುವ ಪರಿಮಿತ ರಜಾ ದಿನಗಳ ಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು









