ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ಯುವತಿಯನ್ನು ಪ್ರೀತಿಸಿದ್ದಾನೆ ಎನ್ನುವ ಒಂದೇ ಒಂದು ಕಾರಣಕ್ಕೆ, ನಡು ರಸ್ತೆಯಲ್ಲಿಯೇ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಯಲಹಂಕ-ಹಿಂದೂಪುರ ರಸ್ತೆಯ ಚರ್ಚ್ ಮುಂಭಾಗದಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ಪವನ್ ಕುಮಾರ್ (30) ಕೊಲೆಯಾದ ಯುವಕ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಪರಿಶೀಲಿಸಿದ್ದಾರೆ. ಡಿವೈಎಸ್ಪಿ ಪಾಡುರಂಗ ಮತ್ತು ನಗರ ಠಾಣೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶಗೌಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
ಮೃತ ವ್ಯಕ್ತಿ ಜಾಲಪ್ಪ ಕಾಲೇಜಿನಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದರು. ಕಾಲೇಜಿನ ವಸತಿ ಗೃಹದಲ್ಲಿ ತನ್ನ ತಾಯಿ ಜೊತೆ ವಾಸವಾಗಿದ್ದರು. ಗುರುವಾರ ರಾತ್ರಿ 9 ಗಂಟೆ ಸಮಯದಲ್ಲಿ ಫೋನ್ ಮಾಡಿ ಹೊರಗೆ ಕರೆಸಿಕೊಂಡಿದ್ದಾರೆ. ಆಟೋದಲ್ಲಿ ಬರುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಆಟೋವನ್ನು ಅಡ್ಡಗಟ್ಟಿ, ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರ ಹಲ್ಲೆಯಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಯುವತಿಯನ್ನು ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ರು. ಇತ್ತಿಚೇಗೆ ಮತ್ತೆ ಇಬ್ಬರು ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.








