ಬೆಂಗಳೂರು : ರಾಜ್ಯ ಸರ್ಕಾರದಲ್ಲಿ 63% ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ, ನನ್ನ ಹೇಳಿಕೆ ತಿರುಚಲಾಗಿದೆ ಎಂದು ಉಪ ಲೋಕಾಯುಕ್ತ ಬಿ ವೀರಪ್ಪ ಅವರು ಇದೀಗ ಸ್ಪಷ್ಟನೆ ನೀಡಿದ್ದಾರೆ.
ವಿಚಾರವಾಗಿ ಉಪ ಲೋಕಾಯುಕ್ತ ಬಿ ವೀರಪ್ಪ ಮಾತನಾಡಿದ್ದು ನನ್ನ ಹೇಳಿಕೆಯನ್ನು ತಿರುಚಲಾಗಿದೆ ಹೈಕೋರ್ಟ್ ಸಭಾಭವನದಲ್ಲಿ ಪುಸ್ತಕ ಬಿಡುಗಡೆ ಸಮಾರಂಭವಿತ್ತು. ಈ ವೇಳೆ ದೇಶಾದ್ಯಂತ ಇರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದೇನೆ. ಸಂಪೂರ್ಣವಾಗಿ ನನ್ನ ಭಾಷಣ ಆರಿಸದೆ ತಪ್ಪಾಗಿ ತಿರುಸಲಾಗಿದೆ ಎಂದು ಬೆಂಗಳೂರಿನಲ್ಲಿ ಒಬ್ಬ ಲೋಕಾಯುಕ್ತ ನ್ಯಾ ಬಿ.ವಿರಪ್ಪ ಸ್ಪಷ್ಟಪಡಿಸಿದರು.








