ದಾವಣಗೆರೆ: ರಾಜ್ಯದಲ್ಲಿ ನಾಯಿ ದಾಳಿಗೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯಲ್ಲಿ ರಾಟ್ ವೀಲರ್ ನಾಯಿ ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್ ವೀಲರ್ ನಾಯಿಗಳ ದಾಳಿಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅನಿತಾ (38) ಮೃತ ಮಹಿಳೆ.
ತಡರಾತ್ರಿ ಜಮೀನಿನಲ್ಲಿ ಮಾಲೀಕ ರಾಟ್ ವೀಲರ್ ನಾಯಿಗಳನ್ನು ಬಿಟ್ಟಿದ್ದರು. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ರಾಟ್ ವೀಲರ್ ನಾಯಿಗಳು ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅನಿತಾ ಸಾವನ್ನಪ್ಪಿದ್ದಾರೆ.








