Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags)

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

ಐಪಿಎಲ್ ಪ್ರೇಮಿಗಳಿಗೆ ಗುಡ್ ನ್ಯೂಸ್: 2028 ರಿಂದ 94 ಪಂದ್ಯಗಳ ಅಬ್ಬರ; ಪ್ರತಿ ತಂಡಕ್ಕೂ ಸಿಗಲಿದೆ 18 ಪಂದ್ಯಗಳ ಅವಕಾಶ!

ರಷ್ಯಾ-ಉಕ್ರೇನ್ ನಡುವೆ 3 ದಿನಗಳ ಕದನ ವಿರಾಮ ಘೋಷಿಸಿದ ಅಮೇರಿಕಾ ಅಧ್ಯಕ್ಷ ಟ್ರಂಪ್ | Russia -Ukraine war

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ
KARNATAKA

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

By kannadanewsnow57

ಶಿವಮೊಗ್ಗ : ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಮಳೆಮಾಪಕ ಕೇಂದ್ರಗಳ ಮೂಲಕ ಸಂಗ್ರಹಿಸಿದ ಹವಾಮಾನ ದತ್ತಾಂಶಗಳನ್ನು ಆಧರಿಸಿ ವಿಮಾ ಪರಿಹಾರವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಆದರೆ, ಜಿಲ್ಲೆಯಲ್ಲಿರುವ 280ಮಳೆ ಮಾಪನ ಕೇಂದ್ರಗಳಲ್ಲಿ ಕೆಲವು ದುರಸ್ತಿಯಲ್ಲಿದ್ದು, ಸರಿಯಾದ ಮಳೆಮಾಪನ ವರದಿ ಹಾಗೂ ದತ್ತಾಂಶ ದೊರೆಯದಿರುವ ಪ್ರದೇಶಗಳಲ್ಲಿನ ರೈತರ ಬೆಳೆಹಾನಿಯ ಪ್ರಮಾಣ ಅಂದಾಜು ಸಿಗದೆ ಪರಿಹಾರ ಕೊಡುವಲ್ಲಿ ವಿಮಾ ಕಂಪನಿಗಳು ಹಿಂದೆ ಸರಿಯುತ್ತಿದ್ದು, ಇದರಿಂದಾಗಿ ರೈತರಿಗೆ ವಿಮಾ ಮೊತ್ತ ದೊರೆಯದೆ ಅತೀವ ನಷ್ಟ ಉಂಟಾಗುತ್ತಿದೆ. ಈ ಸಂಬಂಧ ಮಲೆನಾಡು ವಿಭಾಗದ ರೈತರಿಂದ ಸಾಕಷ್ಟು ದೂರುಗಳು ಬಂದಿವೆ ಎಂದವರು ನುಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಅಡಕೆ, ಶುಂಠಿ, ಕಾಳುಮೆಣಸು, ಮಾವಿನಂತಹ ಬೆಳೆಗಳನ್ನು ವಿಮಾ ವ್ಯಾಪ್ತಿಗೆ ಪರಿಗಣಿಸಲಾಗುತ್ತಿದೆ. ವಿಮಾಪಾಲಿಸಿಯಲ್ಲಿ ನಿರ್ದಿಷ್ಟಪಡಿಸಿದ ಹವಾಮಾನ ಘಟಕಗಳು ಇಳುವರಿ ನಷ್ಟವನ್ನು ಲೆಕ್ಕಿಸಿ ರೈತರಿಗೆ ಸ್ವಯಂಚಾಲಿತವಾಗಿ ಮತ್ತು ತ್ವರಿತವಾಗಿ ಪರಿಹಾರ ನೀಡುತ್ತವೆ. ಆದರೆ, ಮಳೆಮಾಪನ ಘಟಕಗಳ ನಿಷ್ಕ್ರಿಯತೆ ಮತ್ತು ಸಮರ್ಪಕ ಮಾಹಿತಿ ನೀಡದಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದ ಅವರು, ಈ ಸಂಬಂಧ ಅಭಿವೃದ್ದಿ ಆಯುಕ್ತರು ಹಾಗೂ ವಿಮಾ ಕಂಪನಿಗಳ ನಡುವೆ ಸಮಾಲೋಚನೆ ನಡೆಸಿ, ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು, ವಿಮಾ ಕಂಪನಿಗಳ ವ್ಯವಸ್ಥಾಪಕರು ಸ್ಪಂದಿಸದಿದ್ದಲ್ಲಿ ಅನಿವಾರ್ಯವಾಗಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಮೊರೆ ಹೋಗಲಾಗುವುದು. ಈ ಹಿಂದೆಯೂ ರೈತರು ನ್ಯಾಯಾಲಯಕ್ಕೆ ಹೋಗಿ ಪರಿಹಾರಧನ ಪಡೆದ ಉದಾಹರಣೆಗಳಿವೆ ಎಂದವರು ನುಡಿದರು.

ಮಳೆ ಮಾಪನ ಕೇಂದ್ರಗಳ ಅಸಮರ್ಪಕ ನಿರ್ವಹಣೆ ಮತ್ತು ದತ್ತಾಂಶ ಸಂಗ್ರಹದ ನ್ಯೂನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದ್ದು, ದುರಸ್ತಿಯಲ್ಲಿರುವ ಘಟಕಗಳಲ್ಲಿ ಆಧುನಿಕ ಯಂತ್ರಗಳನ್ನು ಅಳವಡಿಸಲು ಈಗಾಗಲೇ ಕೃಷಿ ಸಚಿವರು ಸೂಕ್ತ ನಿರ್ಣಯ ಕೈಗೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಿರುವ ಯಂತ್ರಗಳ ಮಾಹಿತಿ ನೀಡಿದಲ್ಲಿ ಅವುಗಳನ್ನು ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

• ಶಿವಮೊಗ್ಗ ಜಿಲ್ಲೆಯಂತೆಯೇ ನೆರೆಯ ಕಾರವಾರ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತಿತರ ಜಿಲ್ಲೆಗಳಲ್ಲಿಯೂ ಮಳೆ ಮಾಪನ ಯಂತ್ರಗಳು ದುರಸ್ತಿಯಲ್ಲಿದ್ದು, ದತ್ತಾಂಶ ಸಂಗ್ರಹದಲ್ಲಿ ವ್ಯತ್ಯಯಗಳಾಗಿರುವುದನ್ನು ಸಂಘಟಿತವಾಗಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಧನ ಒದಗಿಸಲು ಮನವಿ ಮಾಡಿಕೊಳ್ಳಲಾಗುವುದು. – ಗುರುದತ್ತ ಹೆಗಡೆ, ಮಾನ್ಯ ಜಿಲ್ಲಾಧಿಕಾರಿಗಳು. ಶಿವಮೊಗ್ಗ.

ವಿಮೆ ಮಾಡಿಸಿದ ಸಂತ್ರಸ್ಥ ರೈತರೆಲ್ಲರಿಗೂ ಪರಿಹಾರ ಧನ ಕೊಡಲೇಬೇಕಾದುದು ಸರ್ಕಾರದ ಅಂತೆಯೇ ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ವಹಿಸಲಾಗುವುದಲ್ಲದೇ ವಿಮಾ ಕಂಪನಿಗಳ ಪ್ರತಿನಿಧಿಗಳೊಬ್ಬರು ಸದಾ ಜಿಲ್ಲಾ ಕೇಂದ್ರದಲ್ಲಿರುವಂತೆಯೂ ಸೂಚಿಸಲಾಗುವುದು ಎಂದ ಅವರು, ಸಕಾಲದಲ್ಲಿ ಮಾಹಿತಿ ಒದಗಿಸದಲ್ಲಿ ಶೀಘ್ರದಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಅಲ್ಲದೇ ಕಳೆದ ಮುಂಗಾರು ಮಳೆಯಿಂದಾಗಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಅಡಿಕೆ ಬೆಳೆಗೆ ಕಂಡುಬಂದ ಎಲೆಚುಕ್ಕೆ ರೋಗ ಮತ್ತು ಕೊಳೆರೋಗದಿಂದಾಗಿ ಅತೀವ ಪ್ರಮಾಣ ಬೆಳೆ ಹಾನಿ ಹಾಗೂ ಇಳುವರಿ ಕುಂಠಿತವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಪ್ರತಿ ಹೆ.ಗೆ ರೂ.42,000/-ಗಳ ಪರಿಹಾರಧನ ನೀಡುವಂತೆ ತೋಟಗಾರಿಕೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ವಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ|| ಕಿರಣ್ಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ|| ಸಂಜಯ್ಎ.ಬಿ., ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Immediate action to correct the deficiency in payment of weather-based crop insurance premiums: Minister Madhu Bangarappa
Share. Facebook Twitter LinkedIn WhatsApp Email

Related Posts

ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags)

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

3 Mins Read

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

2 Mins Read
ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]

ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು

3 Mins Read
Recent News
ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags)

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

ಐಪಿಎಲ್ ಪ್ರೇಮಿಗಳಿಗೆ ಗುಡ್ ನ್ಯೂಸ್: 2028 ರಿಂದ 94 ಪಂದ್ಯಗಳ ಅಬ್ಬರ; ಪ್ರತಿ ತಂಡಕ್ಕೂ ಸಿಗಲಿದೆ 18 ಪಂದ್ಯಗಳ ಅವಕಾಶ!

ರಷ್ಯಾ-ಉಕ್ರೇನ್ ನಡುವೆ 3 ದಿನಗಳ ಕದನ ವಿರಾಮ ಘೋಷಿಸಿದ ಅಮೇರಿಕಾ ಅಧ್ಯಕ್ಷ ಟ್ರಂಪ್ | Russia -Ukraine war

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

State News
ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags) KARNATAKA

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

By kannadanewsnow07 KARNATAKA 3 Mins Read

ಯಾದಗಿರಿ:  ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕರ್ತವ್ಯದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸುಲಿಗೆಗೆ ಇಳಿದಿದ್ದ…

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]

ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು

ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದಾಗಲೇ ಘೋರ ದುರಂತ: ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.